Advertisement

ಕೋವಿಡ್ 19: ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಿದ್ದಕ್ಕೆ ಅರಿಜೋನಾದಲ್ಲಿ ಪ್ರತಿಭಟನೆ

08:21 AM May 17, 2020 | Nagendra Trasi |

ವಾಷಿಂಗ್ಟನ್:ಕೋವಿಡ್ 19 ವೈರಸ್ ನಿಂದ ಅಮೆರಿಕ ತತ್ತರಿಸಿ ಹೋಗಿದ್ದು, ಮತ್ತೊಂದೆಡೆ ಅಮೆರಿಕದ ಹಲವು ರಾಜ್ಯಗಳು ಆರ್ಥಿಕ ಚಟುವಟಿಕೆ ಹಿನ್ನೆಲೆಯಲ್ಲಿ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಇದು ಸಾವಿನ ಸಂಖ್ಯೆ ಮತ್ತಷ್ಟು ಏರಲು ಕಾರಣವಾಗುತ್ತದೆ ಎಂದು ಸಾರ್ವಜನಿಕ ಆರೋಗ್ಯ ತಜ್ಞರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಅಲ್ಲದೇ ಅಮೆರಿಕದ ಅರಿಜೋನಾದಲ್ಲಿ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಿದ್ದರ ಬಗ್ಗೆ ಜನರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.

ಅಂಕಿ ಅಂಶದ ಪ್ರಕಾರ ಅರಿಜೋನಾ ರಾಜ್ಯದಲ್ಲಿ ಕೋವಿಡ್ 19 ವೈರಸ್ ಗೆ 620 ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ವರದಿ ತಿಳಿಸಿದೆ.

ಅಮೆರಿಕದಲ್ಲಿ ಕೋವಿಡ್ 19 ವೈರಸ್ ಅಟ್ಟಹಾಸ ಮುಂದುವರಿದಿದ್ದು, ಈಗಾಗಲೇ 58,300 ಜನರು ಸಾವನ್ನಪ್ಪಿದ್ದಾರೆ. ಸುಮಾರು ಒಂದು ಮಿಲಿಯನ್ ಗೂ ಅಧಿಕ ಪ್ರಕರಣ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next