Advertisement

Belagavi: ಮಹಾಮೇಳಾವ್ ಕಿತಾಪತಿ: ಎಂಇಎಸ್ ಮುಖಂಡರು ವಶಕ್ಕೆ

11:31 AM Dec 09, 2024 | Team Udayavani |

ಬೆಳಗಾವಿ: ಚಳಿಗಾಲ ಅಧಿವೇಶನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಮ್ಮಿಕೊಂಡಿದ್ದ ಮಹಾಮೇಳಾವ್ ಪ್ರತಿಭಟನೆ ನಡೆಸಲು ಬಂದಿದ್ದ ಎಂಇಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೋಮವಾರ (ಡಿ.09) ಪೊಲೀಸರು ವಶಕ್ಕೆ ಪಡೆದರು.

Advertisement

ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಬಂದಿದ್ದ ಎಂಇಎಸ್ ಕಾರ್ಯಕರ್ತರು ಜೈ ಮಹಾರಾಷ್ಟ್ರ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಘೋಷಣೆ ಕೂಗಿದರು. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದುಕೊಂಡರು.

ಬೆಳಗಾವಿ ನಗರ ಸೇರಿದಂತೆ ವಿವಿಧ ಹಳ್ಳಿಗಳಿಂದ ಐದಾರು ಜನರ ಗುಂಪು ಕಟ್ಟಿಕೊಂಡು ಬರುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದುಕೊಂಡು ಹೋದರು. ಇನ್ನೂ ನಾಲ್ಕು-ಐದು ಜನ ಬಂದು ಪ್ರತಿಭಟನೆ ನಡೆಸುತ್ತಿದ್ದು, ಇಲ್ಲಿಗೆ ಬಂದ ಪ್ರತಿಯೊಬ್ಬರನ್ನೂ ವಶಕ್ಕೆ ಪಡೆದು ಕೊಳ್ಳುತ್ತಿದ್ದಾರೆ.

ಧರ್ಮವೀರ ಸಂಭಾಜಿ ವೃತ್ತದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಈ ವೃತ್ತದಲ್ಲಿ ಸಾಗುವ ವಾಹನ ಸಂಚಾರ ದಟ್ಟಣೆ ಆಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next