ಬೆಳಗಾವಿ: ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಪ್ಪುಮಸಿ ಬಳಿದಿರುವುದನ್ನು ಖಂಡಿಸಿ ಬೆಳಗಾವಿ ನಗರದ ಸಂಭಾಜಿ ವೃತ್ತದಲ್ಲಿ ಶುಕ್ರವಾರ ಹಿಂದೂಪರ ಸಂಘಟನೆಗಳು ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ರಾತ್ರಿ ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದ ಧರ್ಮವೀರ ಸಂಭಾಜಿ ವೃತ್ತದಲ್ಲಿ ನನ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಜೀಪ್ ಗಾಜು ಪುಡಿ ಪುಡಿಯಾಗಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದಾರೆ.
ಅಹಿತಕರ ಘಟನೆ ನಡೆಯದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ರಾತ್ರಿಯಾದರೂ ಸಮಾಜ ವೃತ್ತದಲ್ಲಿ ಜನಸ್ತೋಮ ಸೇರಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ
ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಮಸಿ ಬರೆದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ರಾಜ್ಯದಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಕಿಡಿಗೇಡಿಗಳನ್ನು ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು