Advertisement
ಬುಧವಾರ ನಗರದ ತಾಲೂಕು ಕಚೇರಿ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು, ಕಾರಿಗೆ ಹಗ್ಗಕಟ್ಟಿ ಎಳೆದು, ಬೈಕ್ ತಳ್ಳಿಕೊಂಡು ಆಜಾದ್ ಪಾರ್ಕ್ ವೃತ್ತ ತಲುಪಿದರು. ಅಲ್ಲಿ ಕಟ್ಟಿಗೆ ಬಳಸಿ ಚಹ ತಯಾರಿಸಿ ಎಲ್ಲರಿಗೂ ಹಂಚುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ,ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಅರಣ್ಯ ಮತ್ತು ವಿಹಾರಧಾಮಗಳ ನಿಗಮದಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಜನವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಜನಪರ ಶಾಸನಗಳನ್ನು ರೂಪಿಸುವಲ್ಲಿ, ಮೂಲಭೂತಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ.ದಿನದಿಂದ ದಿನಕ್ಕೆ ಆರ್ಥಿಕತೆ ಕುಸಿಯುತ್ತಿದ್ದು,ಬಡವರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ. 14ಕೋಟಿ ಜನರು ಕೆಲಸ ಕಳೆದುಕೊಂಡಿದ್ದಾರೆ. ಸಣ್ಣಮತ್ತು ಗುಡಿ ಕೈಗಾರಿಕೆಗಳು ಬಾಗಿಲು ಮುಚ್ಚಿವೆ.ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ಬೀದಿಗಿಳಿದು ಹೋರಾಡಬೇಕಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ|ಡಿ.ಎಲ್.ವಿಜಯಕುಮಾರ್ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಕಡಿಮೆ ಇದ್ದರು ದೇಶದಲ್ಲಿ ದಿನೇ ದಿನೆ ಪೆಟ್ರೋಲ್,ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯಾಗುತ್ತಿದೆ.ಸರ್ಕಾರಗಳ ಜನವಿರೋ ಧಿ ನೀತಿಗಳಿಂದ ಸಾಮಾನ್ಯ ಜನರ ಸ್ಥಿತಿ ದುಸ್ತರವಾಗಿದೆ ಎಂದರು.ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಹೂವಪ್ಪ,ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂತೋಷ್, ಜಿಲ್ಲಾವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಸಿಡಿಎ ಮಾಜಿ ಅಧ್ಯಕ್ಷ ಹನೀಫ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯಮಂಜುನಾಥ್, ಕ್ಷೇತ್ರ ಸಮಿತಿ ಅಧ್ಯಕ್ಷಹಂಪಾಪುರ ಮಂಜೇಗೌಡ, ಮುಖಂಡರಾದ ರೂಬೆನ್ ಮೊಸೆಸ್, ಪವನ್, ಹಿರೇಮಗಳೂರು ರಾಮಚಂದ್ರ, ಪ್ರಕಾಶ್, ಆದಿಲ್, ಜೇಮ್ಸ್,ಆನಂದ್, ಸಿಲ್ವೆಸ್ಟರ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಚೇತನ, ಯಶೋಧಮ್ಮ,ಸುರೇಖಾ ಸಂಪತ್‌ರಾಜ್, ಗುಣವತಿ ಇತರರು ಉಪಸ್ಥಿತರಿದ್ದರು