ಕಲಬುರಗಿ: ಅಫಜಲಪುರ ತಾಲೂಕಿನ ನೀಲೂರು ಗ್ರಾಮದ ರೈಲ್ವೆ ಬ್ರಿಡ್ಜ್ ಅಗಲೀಕರಣಕ್ಕೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಪೊಲೀಸರು ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಗ್ರಾಮದಲ್ಲಿ ರೈಲ್ವೆ ಹಳಿ ಡಬ್ಲಿಂಗ್ ಕಾಮಗಾರಿ ನಡೆಯುತ್ತಿದ್ದು, ಈಗಿರುವ ರೈಲ್ವೆ ಬ್ರಿಡ್ಜ್ ಅಗಲೀಕರಣ ಮಾಡಿ ಕಾಮಗಾರಿ ಮಾಡುವಂತೆ ಗ್ರಾಮಸ್ಥರ ಒತ್ತಾಯವಾಗಿದೆ. ಆದರೆ, ಬ್ರಿಡ್ಜ್ ಅಗಲೀಕರಣ ಮಾಡದೇ ಕಾಮಗಾರಿ ಮಾಡಲು ರೈಲ್ವೆ ಇಲಾಖೆ ಮುಂದಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಈಶ್ವರಪ್ಪ ನಂಬ್ಕೊಂಡು ಪಕ್ಷಕ್ಕೆ ಹೋದ್ರೇ ಎನು ಆಗಲ್ಲ, ಯಾರಿಗೂ ಅಧಿಕಾರ ಕೊಡ್ಸಲ್ಲ: ಬೇಳೂರು
ಹೀಗಾಗಿ ಮಂಗಳವಾರ ಇಡೀ ಗ್ರಾಮಸ್ಥರು ಕೂಡಿಕೊಂಡು ಪ್ರತಿಭಟನೆ ಹಮ್ಮಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಬ್ರಿಡ್ಜ್ ಅಗಲೀಕರಣ ಮಾಡದೆ ಕಾಮಗಾರಿ ನಡೆಸುವಂತಿಲ್ಲ ಎಂದು ಪಟ್ಟು ಹಿಡಿದ್ದು, ರೈಲ್ವೆ ಕಾಮಗಾರಿ ನಡಯುವ ಸ್ಥಳಕ್ಕೆ ಹೋಗಿ ಕಾಮಗಾರಿ ತಡೆಯಲು ಯತ್ನಿಸಿದರು.
ಈ ವೇಳೆ ಗ್ರಾಮಸ್ಥರನ್ನು ಪೊಲೀಸರು ತಡೆದರು. ಇದರಿಂದ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ವಾಗ್ವಾದ ಸಹ ನಡೆಯಿತು. ಇಡೀ ಗ್ರಾಮದಲ್ಲಿ ಬಿಗುವಿವ ವಾತಾವರಣ ನಿರ್ಮಾಣವಾಗಿದೆ.
ಇನ್ನು, ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈಗಾಗಲೇ ಬೆಳಗ್ಗೆಯಿಂದಲೇ ಎಲ್ಲ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ