Advertisement
ಪ್ರತಿಭಟನ ಸಭೆ ಉದ್ದೇಶಿಸಿ ಮಾತನಾಡಿದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಕಾರ್ಯ ದರ್ಶಿ ವಿವೇಕ್ ವಿನ್ಸೆಂಟ್ ಪಾಯಸ್, ಅಪಘಾತ, ಅಪರಾಧಗಳಿಗೆ ಮದ್ಯ ಪಾನವೇ ಪ್ರಮುಖ ಕಾರಣವಾಗಿರುವುದರಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯ ಮದ್ಯದಂಗಡಿ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದರು.
ವೇದಿಕೆ ಪುತ್ತೂರು ತಾ| ಅಧ್ಯಕ್ಷ ಪದ್ಮನಾಭ ಶೆಟ್ಟಿ ಮಾತನಾಡಿ, ಇಲ್ಲಿ ನಡೆಯುತ್ತಿರುವ ಹೋರಾಟ ವ್ಯಕ್ತಿಯ ವಿರುದ್ಧವಲ್ಲ, ಮದ್ಯದಂಗಡಿಯಿಂದ ಜನರಿಗೆ ಆಗುವ ತೊಂದರೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುತ್ತಿದ್ದೇವೆ. ವಿವಿಧ ಇಲಾಖೆಗಳಿಗೆ, ಸಂಬಂಧಿಸಿದವರಿಗೆ ಮನವಿ ಮಾಡಿದ್ದರೂ ಸ್ಪಂದನೆ ದೊರೆಯದ ಕಾರಣ ಪ್ರತಿಭಟನೆಗೆ ಇಳಿದಿದ್ದೇವೆ ಎಂದರು.
Related Articles
Advertisement
ಉಗ್ರ ಪ್ರತಿಭಟನೆಯ ಎಚ್ಚರಿಕೆದ.ಕ. ಜಿಲ್ಲಾ ದಲಿತ ಸೇವಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಅಣ್ಣು ಎಳ್ತಿಮಾರ್ ಮಾತನಾಡಿ, ಕಾನೂ ನನ್ನು ಉಲ್ಲಂ ಸಿದ ಬಾರ್ ಮಾಲಕರು ಹೋರಾಟ ನಡೆಸುವವರಿಗೆ ಬೆದರಿಕೆ ಹಾಕುವ ಮೂಲಕ ಗೂಂಡಾಗಿರಿ ಪ್ರದರ್ಶಿಸುತ್ತಿದ್ದಾರೆ. ಕೂಡಲೇ ಬಾರ್ ತೆರವುಗೊಳಿಸದಿದ್ದರೆ ಉಗ್ರ ಪ್ರತಿಭಟನೆ ಅನಿವಾರ್ಯ ಎಂದು ಎಚ್ಚರಿಸಿದರು. ಮದ್ಯದಂಗಡಿ ತೆರವುಗೊಳಿಸುವ ಹೋರಾಟ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವೊಕ್ಲು ಮಾತನಾಡಿ, ಕಾನೂನಿಗೆ ಮಣ್ಣೆರಚಿರುವ ಬಾರ್‌ನ ಮಾಲಕರಿಗೆ ಹೋರಾಟ ಸಮಿತಿಯವರನ್ನು ಕಿಡಿಗೇಡಿಗಳು ಎಂದು ಹೇಳುವ ನೈತಿಕ ಹಕ್ಕಿಲ್ಲ, ಮದ್ಯದಂಗಡಿ ವಿರುದ್ಧದ ಹೋರಾಟ ನಡೆಯಲಿದೆ ಎಂದರು. ಅಕ್ರಮಗಳ ವಿರುದ್ದ ಧ್ವನಿ ಎತ್ತಿದವರಿಗೆ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಹೋರಾಟದಲ್ಲಿ ಸಕ್ರಿಯ ವಾಗಿ ಪಾಲ್ಗೊಂಡ ಜನಪ್ರತಿನಿಧಿಗಳ ಮೇಲೆ ಸುಳ್ಳು ಕೇಸು ದಾಖಲಿಸಿ ಪೊಲೀಸ್ ಸ್ಟೇಷನ್‌ಗೆ ಕರೆಸುವ ಕೆಲಸ ಬಾರ್ ಮಾಲಕರಿಂದ ನಡೆಯುತ್ತಿದೆ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ಸರ್ವೋತ್ತಮ ಗೌಡ ಆರೋಪಿಸಿದರು. ವೇದಿಕೆ ತಾಲೂಕು ಸಮಿತಿ ಸದಸ್ಯ ನಾರಾಯಣ ರೈ, ನೀತಿ ಟ್ರಸ್ಟ್ ನ ರಾಜ್ಯಾಧ್ಯಕ್ಷ ಜಯನ್ ಟಿ., ಬೆಳ್ತಂಗಡಿ ತಾಲೂಕು ಡಿವೈಎಫೈ ಅಧ್ಯಕ್ಷ ಧನಂಜಯ ಗೌಡ ಪಟ್ರಮೆ,ಗ್ರಾಮಾಭಿವೃದ್ದಿ ಯೋಜನೆ ಪುತ್ತೂರು ತಾಲೂಕು ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ಜನ ಜಾಗೃತಿ ತಾ.ಪಂ. ಸದಸ್ಯ ನಾರಾಯಣ ಭಟ್, ನೆಲ್ಯಾಡಿ ವಲಯ ಮೇಲ್ವಿಚಾರಕ ಧರ್ನಪ್ಪ ಗೌಡ, ದಲಿತ ಸೇವಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಅಧ್ಯಕ್ಷ ಆನಂದ ಕೆ.ಪಿ., ಇಚಿಲಂಪಾಡಿ ತಾ.ಪಂ. ಸದಸ್ಯೆ ವಲ್ಸಮ್ಮ ಕೆ.ಟಿ., ಬಿಳಿನೆ ತಾ.ಪಂ. ಸದಸ್ಯೆ ಆಶಾ ಲಕ್ಷ್ಮಣ್, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಕೌಕ್ರಾಡಿ ತಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್, ಗೆಳತಿ ಯುವತಿ ಮಂಡಲದ ಅಧ್ಯಕ್ಷೆ ವಿಜಯಾ, ನೆಲ್ಯಾಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಜಯೇಶ್ ವಿ.ಜೆ.ಉಪಸ್ಥಿತರಿದ್ದರು. ಹೋರಾಟ ಸಮಿತಿ ಅಧ್ಯಕ್ಷ ರವಿಚಂದ್ರ ಸ್ವಾಗತಿಸಿ, ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಸದಸ್ಯ ಗಂಗಾಧರ ಶೆಟ್ಟಿ ನಿರೂಪಿಸಿದರು. ಮನವಿ ಸಲ್ಲಿಕೆ
ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾ ಯಿತು. ಮನವಿ ಸ್ವೀಕರಿಸಿದ ಅಬಕಾರಿ ಡಿವೈಎಸ್‌ಪಿ ಮುರಳೀಧರರವರು ಮಾತನಾಡಿ, ಬಾರ್‌ನ ಮಾಲಕರು ಪಂಚಾಯತ್ ರಸ್ತೆ ಮೂಲಕ ದಾರಿಯ ನೀಲ ನಕಾಶೆ ತೋರಿಸಿದ್ದಕ್ಕೆ ಅನುಮತಿ ನೀಡಲಾಗಿದೆ. ಇಲ್ಲಿ ನೀಡಿರುವ ಮನವಿಯನ್ನು ಅಬಕಾರಿ ಜಿಲ್ಲಾಧಿಕಾರಿಗಳಿಗೆ ಕಳಿಸುವುದಾಗಿ ಭರವಸೆ ನೀಡಿದರು. ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಬಳಿಯಿಂದ ನೆಲ್ಯಾಡಿ ಪೇಟೆವರೆಗೆ ಬೃಹತ್ ಪ್ರತಿಭಟನ ಮೆರವಣಿಗೆ ನಡೆಯಿತು. ಮಹಿಳೆಯರು, ಶಾಲಾ ವಿದ್ಯಾರ್ಥಿಗಳು, ಹಲವಾರು ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.