Advertisement

ಮೋದಿಗೆ ಪ್ರತಿಭಟನೆ ಬಿಸಿ?

06:40 AM Dec 16, 2018 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷೇತ್ರ ರಾಯ್‌ಬರೇಲಿಗೆ ಭೇಟಿ ನೀಡಲಿದ್ದು, ಈ ವೇಳೆ ಮಹಿಳಾ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಚುನಾವಣೆ ಪ್ರಚಾರ ವೇಳೆ ಮೋದಿ ಅವರು ಕಾಂಗ್ರೆಸ್‌ ನಾಯಕಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದನ್ನು ಖಂಡಿಸಿ,  ಪ್ರಧಾನಿಗೆ ಪ್ರತಿಭಟನೆಯ ಸ್ವಾಗತ ನೀಡಲಿದ್ದೇವೆ ಎಂದು ಶಾಸಕಿ ಅದಿತಿ ಸಿಂಗ್‌ ಹೇಳಿದ್ದಾರೆ. ಪ್ರಧಾನಿ ಮೋದಿ ರಾಯ್‌ಬರೇಲಿಯಲ್ಲಿ ಸಾರ್ವಜನಿಕ ಸಭೆ ನಡೆಸುವುದರ ಜೊತೆಗೆ, ಹಮ್‌ ಸಫ‌ರ್‌ ಎಕ್ಸ್‌ಪ್ರೆಸ್‌ಗೆ  ಚಾಲನೆ ನೀಡಲಿದ್ದಾರೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next