ತುಮಕೂರು: ಮಹಾನಗರ ಪಾಲಿಕೆ ದಕ್ಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಾಲಿಕೆ ಆಯುಕ್ತ ಟಿ. ಭೂಬಾಲನ್ ವರ್ಗಾವಣೆ ಖಂಡಿಸಿ ನಗರದಲ್ಲಿ ಸೋಮವಾರ ವಿವಿಧಸಂಘಟನೆಗಳ ಮುಖಂಡರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ನಗರದ ಟೌನ್‌ಹಾಲ್‌ನ ಬಿಜಿಎಸ್ ವೃತ್ತದಲ್ಲಿ ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಸೇನೆ, ಬೀದಿ ವ್ಯಾಪಾರಿಗಳ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರುಗಳು ಸಮಾವೇಶಗೊಂಡು ಭೂಬಾಲನ್ ವರ್ಗಾವಣೆಗೆ ತೀವ್ರ
ಆಕ್ರೋಶ ವ್ಯಕ್ತ ಪಡಿಸಿದರು. ಮುಖಂಡ ಅರುಣ್‌ಕುಮಾರ್ ಮಾತನಾಡಿ, ಪಾಲಿಕೆ ಆಯುಕ್ತರಾಗಿ ಟಿ.ಭೂಬಾಲನ್‌ರವರು ಉತ್ತಮ ಕೆಲಸ ಮಾಡುತ್ತ, ಜನಸ್ನೇಹಿ ಅಧಿಕಾರಿಯಾಗಿದ್ದರು. ಅವರು ಪಾಲಿಕೆಗೆ ಬಂದು ಇನ್ನೂ 8 ತಿಂಗಳಾಗಿಲ್ಲ, ಆದರೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿದೆ. ಈ ಕೂಡಲೇ ಅವರ ವರ್ಗಾವಣೆ ರದ್ದುಗೊಳಿಸಿ, ಹಾಲಿ ಸ್ಥಳದಲ್ಲಿಯೇ ಮುಂದು ವರಿಸಬೇಕು ಎಂದು ಒತ್ತಾಯಿಸಿದರು.
ಬೀದಿ ವ್ಯಾಪಾರಿಗಳ ಸಂಘದ ಮುಖಂಡ ಬಾಬಾ ಮಾತನಾಡಿ, ಪಾಲಿಕೆಯಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಭೂಬಾಲನ್ ವರ್ಗಾವಣೆ ಯಿಂದ ಸಾರ್ವಜನಿಕರಲ್ಲಿ ಅಸಮಾಧಾನಮೂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಮಟ್ಟದ ಆಕ್ರೋಶ ವ್ಯಕ್ತವಾಗಿದೆ. ನಗರದ ಹಿತದೃಷ್ಟಿಯಿಂದ ಭೂಬಾಲನ್ ಅವರನ್ನು ಸ್ಮಾರ್ಟ್‌ಸಿಟಿ ಯೋಜನೆಯ ಎಂ.ಡಿ ಮತ್ತು ಪಾಲಿಕೆ ಆಯುಕ್ತರಾಗಿಮುಂದುವರಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಕ್ಷಿತ್ ಕರಿಮಣೆ, ಅಂಜನ್‌ಮೂರ್ತಿ ಸೇರಿದಂತೆ ಹಲವರು ಇದ್ದರು.