Advertisement

ಮಹದಾಯಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

01:13 PM Mar 07, 2017 | Team Udayavani |

ಹುಬ್ಬಳ್ಳಿ: ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಸೋಮವಾರ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.  

Advertisement

ರೈತರು, ಕರ್ನಾಟಕ ಸಂಗ್ರಾಮ ಸೇನೆ, ರತ್ನಭಾರತ ರೈತ ಸಮಾಜದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಮಹದಾಯಿ ನದಿ ನೀರು ಯೋಜನೆ ಜಾರಿಗೆ ಒತ್ತಾಯಿಸಿ ನರಗುಂದದಲ್ಲಿ ನಡೆಸುತ್ತಿರುವ ನಿರಂತರ ಹೋರಾಟ 600ನೇ ದಿನಕ್ಕೆ ಕಾಲಿರಿಸಿದೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಈ ಯೋಜನೆಜಾರಿಗೊಳಿಸುವಲ್ಲಿ ತೀವ್ರ ನಿರ್ಲಕ್ಷé ತೋರುತ್ತಿವೆ ಎಂದು ಆರೋಪಿಸಿ ಘೋಷಣೆ ಕೂಗಿದರು. ಪ್ರಧಾನಿ  ಮೋದಿ ಕೂಡಲೇ ಮಧ್ಯ ಪ್ರವೇಶಿಸಿ ಈ ಸಮಸ್ಯೆ ಇತ್ಯರ್ಥಗೊಳಿಸಬೇಕೆಂದು ಒತ್ತಾಯಿಸಿದರು. 

ಗೋವಾ ಮುಖ್ಯಮಂತ್ರಿ ಯೋಜನೆ ಕುರಿತು ನೀಡಿದ ಹೇಳಿಕೆಯನ್ನು ತೀವ್ರ ಖಂಡಿಸಿದರು. ಖಂಡರಾದ ಬಸವನಗೌಡಹೇಮನಗೌಡ, ಸಂಜೀವ ದುಮ್ಮಕನಾಳ, ಬಸನಗೌಡ ಮರಿಗೌಡ್ರ, ಕುಬೇರ ಪವಾರ, ಜಗದೀಶ ಬಳ್ಳಾರಿ ಇನ್ನಿತರರು ಪಾಲ್ಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next