Advertisement

ಪಡುವಾರಹಳ್ಳಿ ಸರ್ಕಾರಿ ಶಾಲೆಗೆ ಸೌಕರ್ಯ ಕಲ್ಪಿಸಲು ಪ್ರತಿಭಟನೆ

12:36 PM Nov 04, 2018 | |

ಮೈಸೂರು: ಪಡುವಾರಹಳ್ಳಿ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಶ್ರೀಗಂಧ ಯುವಕರ ಸಂಘದ ಸದಸ್ಯರು ಪಡುವಾರಹಳ್ಳಿಯಲ್ಲಿರುವ ಶಾಲೆ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. 

Advertisement

ಪಡುವಾರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ಅಂದಾಜು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಶಾಲೆಯ ಕಾಂಪೌಂಡ್‌ ಕುಸಿದು ಬಿದ್ದಿದ್ದು, ಕುಡಿಯುವ ನೀರಿನ ಬೋರ್‌ವೆಲ್‌ ಸಹ ಕೆಟ್ಟುನಿಂತಿದೆ. ಹೀಗಿದ್ದರೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳು, ಜನ ಪ್ರತಿನಿಧಿಗಳು ಈ ಬಗ್ಗೆ ಕ್ರಮವಹಿಸಿಲ್ಲ.

ಇದರಿಂದಾಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಪ್ರೋತ್ಸಾಹಕವಾಗಿ ಹಲವು ಯೋಜನೆಗಳನ್ನು ರೂಪಿಸಿದ್ದರೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಲಕ್ಷ್ಯದಿಂದ ಈ ಶಾಲೆಯ ಮಕ್ಕಳು ಮೂಲಸೌಕರ್ಯದಿಂದ ವಂಚಿತರಾಗಿದ್ದಾರೆ.

ಕೂಡಲೇ ಶಾಲೆಗೆ ಮೂಲಭೂತ ಸೌಕರ್ಯಗಳಾದ ಕಾಂಪೌಂಡ್‌ ಹಾಗೂ ಬೋರ್‌ವೆಲ್‌ ದುರಸ್ತಿಗೊಳಿಸುವ ಜತೆಗೆ ಮಕ್ಕಳಿಗೆ ಅನುಕೂಲವಾದ ವ್ಯವಸ್ಥೆಗಳನ್ನು ಕಲ್ಪಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಕೀಲ ಪಡುವಾರಹಳ್ಳಿ ಎಂ. ರಾಮಕೃಷ್ಣ, ರಾಜು ಮಾರ್ಕೆಟ್‌, ಎಸ್‌. ಕಾಂತರಾಜು, ಹಿನಕಲ್‌ ಚಂದ್ರು, ರವಿಕುಮಾರ್‌, ಪುರುಷೋತ್ತಮ ಇನ್ನಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next