Advertisement

ಕುರುಬ ಶಾಸಕರಿಗೆ ಸಚಿವ ನೀಡಲು ಪ್ರತಿಭಟನೆ

01:38 PM Jun 08, 2018 | Team Udayavani |

ಮೈಸೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಸಂಪುಟದಲ್ಲಿ ಕುರುಬ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಹಾಲುಮತ ಮಹಾಸಭಾ ಸದಸ್ಯರು ನಗರದ ಗಾಂಧಿಚೌಕದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

Advertisement

ಈ ಬಾರಿಯ ಚುನಾವಣೆಯಲ್ಲಿ ಕುರುಬ ಸಮುದಾಯ ಸಿದ್ದರಾಮಯ್ಯ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಸಚಿವ ಸಂಪುಟದಲ್ಲಿ ಕುರುಬ ಸಮುದಾಯದ ಯಾವುದೇ ಶಾಸಕರಿಗೆ ಮಂತ್ರಿಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷರಾಗುವುದು ಬೇಡ. ಆ

ದ್ದರಿಂದ ಸಿದ್ದರಾಮಯ್ಯ ಸೇರಿದಂತೆ 8 ಮಂದಿ ಕಾಂಗ್ರೆಸ್‌ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತಮ್ಮ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ ಎಂದು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕುರುಬ ಸಮುದಾಯದ ನಾಲ್ಕು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಮುಂದೆ ಕುರುಬ ಸಮುದಾಯದ ಜನರು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಪೂರ್ಣವಾಗಿ ತಿರಸ್ಕರಿಸುವುದಾಗಿ ಎಚ್ಚರಿಸಿದರು. ಹಾಲುಮತ ಮಹಾಸಭಾ ಜಿಲ್ಲಾಧ್ಯಕ್ಷ ವಿಜಯ ಕುಮಾರ್‌, ಕಾರ್ಯದರ್ಶಿ ವಿಜಯೇಂದ್ರ, ಸುಬ್ರಹ್ಮಣ್ಯ, ಧರ್ಮೇಂದ್ರ, ಸಂತೋಷ್‌, ಶಿವಕುಮಾರ್‌, ಮಂಜುನಾಥ್‌ ಇನ್ನಿತರರು ಪಾಲ್ಗೊಂಡಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next