Advertisement

ಕುದುರೆ ಏರಿ ಬಂದು ಪ್ರತಿಭಟನೆ

09:48 AM Jan 18, 2019 | |

ಚಿಕ್ಕಮಗಳೂರು: ಬಿಜೆಪಿ ನಾಯಕರು ಶಾಸಕರ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್‌ ಕುದುರೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡು ವಿನೂತನವಾಗಿ ಪ್ರತಿಭಟಿಸಿದರು.

Advertisement

ನಗರದ ತಾಲೂಕು ಕಚೇರಿಯಿಂದ ಹನುಮಂತಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ|ಡಿ.ಎಲ್‌. ವಿಜಯ್‌ಕುಮಾರ್‌, ರಾಜ್ಯ ರಾಜಕಾರಣದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿರುವ ಬಿಜೆಪಿಯವರ ಕೆಲಸ ಅಸಂವಿಧಾನಿಕವಾಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ತೆರೆದಿದ್ದ ಕರ್ನಾಟಕ ಈಗ ಬಾಗಿಲು ಮುಚ್ಚಿಕೊಂಡಿದೆ. ಏನಾದರೂ ಮಾಡಿ ಲೋಕಸಭೆ ಚುನಾವಣೆಗೂ ಮುನ್ನ ಮತ್ತೂಮ್ಮೆ ಅಧಿಕಾರ ಹಿಡಿಯುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕರ್ನಾಟಕವನ್ನು ಮೆಟ್ಟಿrಲು ಮಾಡಿಕೊಳ್ಳಲು ಹೊರಟಿದ್ದಾರೆ. ಆದರೆ ವಾಮ ಮಾರ್ಗದಲ್ಲಿ ಹೋದರೆ ಅದು ಆಗದು ಎಂಬುದು ಕಳೆದೊಂದು ವಾರದಿಂದ ನಡೆಯುತ್ತಿರುವ ಘಟನೆಗಳಿಂದ ಸಾಬೀತಾಗಿದೆ. ಬಿಜೆಪಿಗೆ ಮುಂದೆಂದೂ ಕರ್ನಾಟಕ ಬಾಗಿಲು ತೆರೆಯದು ಎಂದರು.

ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್‌ ಮಾತನಾಡಿ, ರಫೇಲ್‌ ವಿಮಾನ ಹಗರಣದಲ್ಲಿ ಲಂಚದ ವಾಸನೆ ಬರಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ, ಪಂಚ ರಾಜ್ಯಗಳ ಚುನಾವಣೆಯ ನಂತರ ಜ್ವರ ಬರಿಸಿಕೊಂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಧಿಕಾರ ಇರಲೇಬೇಕು, ಇಲ್ಲವೇ ರಾಷ್ಟ್ರಪತಿ ಆಡಳಿತವನ್ನು ತರುವ ಮೂಲಕ ಚುನಾವಣೆ ಎದುರಿಸಬೇಕು ಎಂಬ ತೀರ್ಮಾನಕ್ಕೆ ಬಂದಂತಿದೆ. ಈ ಮೂಲಕ ದೇಶದ ರಾಜಕೀಯ ಭೂಪಟದಲ್ಲಿ ರಾಜ್ಯಕ್ಕೆ ಕೆಟ್ಟಹೆಸರು ಬರುವಂತೆ ಮಾಡಲು ಬಿಜೆಪಿ ಮುಂದಾಗಿದೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡುವ ಬಿಜೆಪಿ ಪ್ರಯತ್ನ ಫಲಿಸಲ್ಲ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಶಾಂತೇಗೌಡ ಮಾತನಾಡಿ, ಕೆಪಿಸಿಸಿ ಕರೆಯ ಮೇರೆಗೆ ಇಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿರುವ ಈ ಚಳವಳಿ ಇಲ್ಲಿಗೆ ನಿಲ್ಲುವುದಿಲ್ಲ. ಬಿಜೆಪಿಯವರು ಪ್ರಜಾಪ್ರಭುತ್ವ ಕಗ್ಗೊಲೆ ಕೆಲಸ ಮುಂದುವರಿಸಿದರೆ ಮುಂದಿನ ದಿನಗಳಲ್ಲಿ ಕೆಳ ಹಂತದವರೆಗೆ ಚಳವಳಿ ನಡೆಸುತ್ತೇವೆ ಎಂದು ಎಚ್ಚರಿಸಿದರು.

Advertisement

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್‌.ಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ ಶಿವಾನಂದಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಎ.ಎನ್‌.ಮಹೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್.ಪಿ ಮಂಜೇಗೌಡ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಬಿ.ಎಲ್‌.ರಾಮ್‌ದಾಸ್‌, ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್‌.ಶಾಂತೇಗೌಡ, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಐಎನ್‌ಟಿಯುಸಿ ಅಧ್ಯಕ್ಷ ರಾಮಚಂದ್ರ ಒಡೆಯರ್‌, ಎಸ್‌ಸಿ ವಿಭಾಗದ ಅಧ್ಯಕ್ಷ ಹೂವಪ್ಪ, ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ವಿ.ಶಿವಕುಮಾರ್‌, ಸೇವಾದಳ ಅಧ್ಯಕ್ಷ ಸಿಲ್ವರ್‌ಸ್ಟರ್‌, ಐಟಿ ಸೆಲ್‌ ಅಧ್ಯಕ್ಷ ಕಾರ್ತಿಕ್‌ ಚೆಟ್ಟಿಯಾರ್‌, ನಗರಸಭೆ ಸದಸ್ಯರಾದ ರೂಬೆನ್‌ ಮೊಸೆಸ್‌, ಪುಟ್ಟಸ್ವಾಮಿ, ಸುರೇಖ ಸಂಪತ್‌ರಾಜ್‌, ನಗ‌ರಸಭೆ ಮಾಜಿ ಅಧ್ಯಕ್ಷರಾದ ಮಹಮ್ಮದ್‌ ಅಕ್ಬರ್‌, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ನಿಸಾರ್‌ ಅಹಮ್ಮದ್‌, ಜಿಪಂ ಸದಸ್ಯೆ ಪ್ರೇಮಾ ಮಂಜುನಾಥ್‌ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next