Advertisement

ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕ ಆಸ್ತಿ ಹಾನಿ ಸರಿಯೇ- ಆತ್ಮವಿಮರ್ಶೆ ಮಾಡಿಕೊಳ್ಳಿ; ಪ್ರಧಾನಿ

10:01 AM Dec 26, 2019 | Nagendra Trasi |

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಯನ್ನು ಧ್ವಂಸಗೊಳಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದು, ಯಾರು ಇಂತಹ ಕೃತ್ಯಗಳಲ್ಲಿ ಶಾಮೀಲಾಗಿದ್ದಾರೋ ಅವರು ತಾವು ಮಾಡಿದ್ದು ಸರಿಯೇ ಎಂಬ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

Advertisement

ಅವರು ಉತ್ತರಪ್ರದೇಶ ಲಕ್ನೋದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಿನ ಮೆಡಿಕಲ್ ಯೂನಿರ್ವಸಿಟಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ…ಮತ್ತು ಇಂತಹ ಪ್ರತಿಭಟನಾಕಾರರಿಗೆ ಹೇಳಬಯಸುತ್ತೇನೆ, ಒಂದು ವೇಳೆ ಒಳ್ಳೆಯ ರಸ್ತೆ ವ್ಯವಸ್ಥೆ ಇದ್ದರೆ, ಆ ರಸ್ತೆಯ ಒಳಚರಂಡಿ ವ್ಯವಸ್ಥೆಯನ್ನು ಸ್ವಚ್ಚಗೊಳಿಸುವುದು ನಾಗರಿಕರ ಹಕ್ಕಾಗಿದೆ.  ಅದರ ವ್ಯವಸ್ಥೆಯನ್ನು ಕಾಪಾಡುವುದು ನಮ್ಮ ಹೊಣೆಗಾರಿಕೆಯಾಗಿದೆ. ಯಾರು ಹಿಂಸಾಚಾರದ ಪ್ರತಿಭಟನೆಯಲ್ಲಿ ತೊಡಗಿ ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡಿದ್ದಾರೋ ಅಂತಹ ಪ್ರತಿಯೊಬ್ಬರು ತಾವು ಮಾಡಿದ್ದು ಸರಿಯೇ ಎಂಬ ಬಗ್ಗೆ ಪ್ರಶ್ನಿಸಿಕೊಳ್ಳಬೇಕಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next