Advertisement

Subhas Sarkar: ಸಚಿವರನ್ನೇ ಕಚೇರಿಯಲ್ಲಿ ಕೂಡಿ ಹಾಕಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು

04:08 PM Sep 13, 2023 | Suhan S |

ಪಶ್ಚಿಮ ಬಂಗಾಳ: ಸಚಿವರೊಬ್ಬರನ್ನು ಪಕ್ಷದ ಕಾರ್ಯಕರ್ತರೇ ಅವರ ಕಚೇರಿಯಲ್ಲಿ ಕೂಡಿ ಹಾಕಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.

Advertisement

ಮಂಗಳವಾರ (ಸೆ.12 ರಂದು) ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವ ಸುಭಾಸ್ ಸರ್ಕಾರ್ ಅವರನ್ನು ಕಚೇರಿಯಲ್ಲಿ ಬೀಗ ಹಾಕಿ ಕೂಡಿ ಹಾಕಿದ್ದಾರೆ.

ಜಿಲ್ಲಾ ಘಟಕದ ಆಡಳಿತದಲ್ಲಿ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ಆರೋಪಿಸಿ ಈ ರೀತಿ ಮಾಡಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ ಸಚಿವರಾಗಿರವ, ಬಂಕುರಾದ ಸಂಸದರಾಗಿರುವ ಸುಭಾಸ್ ಸರ್ಕಾರ್ ಅವರು ಮಂಗಳವಾರ ಮಧ್ಯಾಹ್ನ  ತನ್ನ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಕಾರ್ಯಕರ್ತರ ಗುಂಪು ಘೋಷಣೆಗಳನ್ನು ಕೂಗುತ್ತಾ ಪ್ರವೇಶ ಮಾಡಿದ್ದಾರೆ. ಸಚಿವರನ್ನು ಅವರ ಕಚೇರಿಯಲ್ಲಿ ಕೂಡಿ ಹಾಕಿ ಹೊರಗಿನಿಂದ ಬೀಗ ಹಾಕಿ ಅವರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ಸುಭಾಸ್‌ ಸರ್ಕಾರ್ ಒಬ್ಬ “ಅಸಮರ್ಥ”‌ ಅವರು ಕಷ್ಟಪಟ್ಟು ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಿಗೆ ಮಹತ್ವ ನೀಡಿಲ್ಲ. ಕೇಂದ್ರ ಸಚಿವರು ತಮಗೆ ಆಪ್ತರಾಗಿರುವವರನ್ನು ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ನೇಮಿಸಿದ್ದಾರೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರಾದ ಮೋಹಿತ್ ಶರ್ಮಾ ಆರೋಪಿಸಿದ್ದಾರೆ.

Advertisement

ಅವರ ಅಧ್ಯಕ್ಷತೆಯಿಂದಾಗಿ ಈ ಬಾರಿ ಬಂಕುರಾ ಪುರಸಭೆಯಲ್ಲಿ ಬಿಜೆಪಿಗೆ ಯಾವುದೇ ಸ್ಥಾನ ಸಿಗಲಿಲ್ಲ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಎರಡು ವಾರ್ಡ್‌ಗಳನ್ನು ಗೆದ್ದಿತ್ತು. ಈ ಬಾರಿ ಪಂಚಾಯಿತಿಯ ಹಲವು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗಲಿಲ್ಲ. ಇದು ನಾಚಿಕೆಗೇಡಿನ ಸಂಗತಿ’ʼ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ವೇಳೆ ಬಿಜೆಪಿ ಕಾರ್ಯಕರ್ತರ ಮತ್ತೊಂದು ಗುಂಪು ಪಕ್ಷದ ಕಚೇರಿಗೆ ತಲುಪಿದ್ದು, ಗೊಂದಲದ ನಡುವೆಯೇ ಉಭಯ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪಕ್ಷದ ಕಚೇರಿಗೆ ಧಾವಿಸಿ ಸರ್ಕಾರ್ ಅವರನ್ನು ಹೊರಗೆ ಕರೆತಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ ಘಟನೆ ದುರದೃಷ್ಟಕರ ಎಂದು ಬಣ್ಣಿಸಿದ್ದು, ಪ್ರತಿಭಟನಾನಿರತ ಪಕ್ಷದ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಘಟನೆಯ ವೀಡಿಯೊವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಟ್ವೀಟ್ ಮಾಡಿದೆ, ಇದು ಬಿಜೆಪಿಯನ್ನು ಅವರ “ಅಂತರ್‌ ಕಲಹ” ಎಂದು ಲೇವಡಿ ಮಾಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next