Advertisement

ಸಚಿವ ಸ್ಥಾನ ವಂಚಿತ ಬೆಂಬಲಿಗರ ಪ್ರತಿಭಟನೆ

06:10 AM Jun 10, 2018 | Team Udayavani |

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರ ಪ್ರತಿಭಟನೆ ಶನಿವಾರವೂ
ಮುಂದುವರಿಯಿತು. ಎಚ್‌.ಕೆ.ಪಾಟೀಲ್‌ಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಆಗ್ರಹಿಸಿ ಪಕ್ಷದ
ಕಾರ್ಯಕರ್ತರು, ಬೆಂಬಲಿಗರು ಗದಗದಲ್ಲಿ ಪ್ರತಿಭಟನೆ ನಡೆಸಿದರು. 

Advertisement

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿ, ಟೈರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸಂಚಾರಕ್ಕೆ ಅಡ್ಡಿ ಪಡಿಸಿದರು.

ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ಬೆಂಬಲಿಗರು ಬೆಂಗಳೂರಿನ ಕೆಪಿಸಿಸಿ ಕಚೇರಿ, ಉಪಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್‌ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

ಇದೇ ವೇಳೆ, ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶಾಸಕರ ಬೆಂಬಲಿಗರು ನಗರದ ಪುರಭವನದ ಎದುರು ಪ್ರತಿಭಟನೆ ನಡೆಸಿದರು.

ನನ್ನ ನಿಲುವನ್ನು ಮಂಗಳವಾರ ತಿಳಿಸುತ್ತೇನೆ. ಡಿ.ಕೆ.ಶಿವಕುಮಾರ್‌ ಹಾಗೂ ರೋಷನ್‌ ಬೇಗ್‌ ಜತೆ ಪಕ್ಷದ ವಿಚಾರ ಮಾತನಾಡಿದ್ದೇನೆ.ನನ್ನ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಿ ಸಚಿವ ಸ್ಥಾನಕ್ಕಾಗಿ ಒತ್ತಡ
ಹಾಕುತ್ತಿದ್ದಾರೆ. ಸಚಿವ ಸ್ಥಾನ ಪ್ರತಿಭಟನೆ ಮಾಡಿ ಪಡೆಯುವಂತದ್ದಲ್ಲ, ಇದು ಸೂಕ್ಷ್ಮ ವಿಚಾರ.

– ಎಚ್‌.ಕೆ.ಪಾಟೀಲ್‌, ಸಚಿವ ಸ್ಥಾನ ವಂಚಿತ ಶಾಸಕ

Advertisement
Advertisement

Udayavani is now on Telegram. Click here to join our channel and stay updated with the latest news.

Next