Advertisement

ಪ್ರಾದೇಶಿಕ ಆಯುಕ್ತರ ಕಚೇರಿಗಳ ರದ್ಧತಿ ವಿರೋಧಿಸಿ ಶುಕ್ರವಾರ ಪ್ರತಿಭಟನೆ

03:19 PM Jul 13, 2021 | Team Udayavani |

ಬೆಳಗಾವಿ: ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ಒಂದೇ ಕಂದಾಯ ಸಚಿವಾಲಯವನ್ನು ಸ್ಥಾಪಿಸುವ ಸಂಬಂಧ ಆಡಳಿತ ಸುಧಾರಣೆ ಆಯೋಗ ಮಾಡಿದ ಶಿಫಾರಸನ್ನು ಅಂಗೀಕರಿಸುವ ಸರಕಾರದ ಚಿಂತನೆಯನ್ನು ವಿರೋಧಿಸಿ ಜುಲೈ 16 ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

Advertisement

ಬೆಳಗಾವಿಯಲ್ಲಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಕಾರ್ಯಾಲಯದಲ್ಲಿ ನಡೆದ ಕನ್ನಡ ಹೋರಾಟಗಾರರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆಯೋಗದ ಶಿಫಾರಸನ್ನು ಅಂಗೀಕರಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದ್ದು ಪ್ರಾದೇಶಿಕ ಆಯುಕ್ತರ ಕಚೇರಿಗಳು ಬಿಳಿಯಾನೆಗಳಾಗಿವೆ ಎಂಬ ಕಂದಾಯ ಸಚಿವ ಆರ್.ಅಶೋಕ ಅವರ ಹೇಳಿಕೆಯನ್ನು ಸಭೆ ಖಂಡಿಸಿತಲ್ಲದೇ ಬೆಂಗಳೂರಿನ ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿರುವ ಬಿಳಿಯಾನೆಗಳ ಪಟ್ಟಿಯನ್ನು ಸಚಿವರು ಮೊದಲು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿತು.

ಇದನ್ನೂ ಓದಿ:ಶೃಂಗೇರಿ ಬ್ಯೂಟಿಪಾರ್ಲರ್ ಯುವತಿ ಮೇಲೆ ಆ್ಯಸಿಡ್ ದಾಳಿ ಕೇಸ್: 4 ಆರೋಪಿಗಳು ದೋಷಿಯೆಂದು ತೀರ್ಪು

ಈ ಹಿಂದೆ ಅಸ್ತಿತ್ವದಲ್ಲಿದ್ದ ವಿಭಾಗಾಧಿಕಾರಿಗಳ ಕಚೇರಿಗಳನ್ನು ರದ್ದುಗೊಳಿಸಲಾಗಿತ್ತು.ನಂತರ ಉದ್ಭವಿಸಿದ ಸಮಸ್ಯೆಗಳ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ಅಸ್ತಿತ್ವಕ್ಕೆ ತರಲಾಗಿತ್ತು.ಈಗ ಮತ್ತೆ ಇವುಗಳನ್ನು ರದ್ದುಗೊಳಿಸುವ ಚಿಂತನೆ ನಡೆಸಿರುವದು ಜನವಿರೋಧಿ ಕ್ರಮವಾಗಿದೆ ಎಂದು ಹೋರಾಟಗಾರರು ಆಕ್ಷೇಪಿಸಿದರು.

Advertisement

ಪ್ರಾದೇಶಿಕ ಆಯುಕ್ತರಿಗೆ ಭೂಸ್ವಾಧೀನ, ಪುನರ್ವಸತಿ, ಪ್ರವಾಹ, ಬರಗಾಲ ನಿರ್ವಹಣೆ, ಜಿಲ್ಲಾ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರ ಹಾಗೂ ಮಹಾನಗರ ಪಾಲಿಕೆಗಳ ಮೇಯರ್ ಉಪಮೇಯರ ಚುನಾವಣೆ ನಿರ್ವಹಣೆ, ಆಣೆಕಟ್ಟುಗಳಿಂದ ನೀರು ಬಿಡುಗಡೆ, ತಾಲೂಕಾ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ, ಸರಕಾರಿ ಸಿಬ್ಬಂದಿಗೆ ವಸತಿ ಗೃಹಗಳ ಹಂಚಿಕೆ ಹಾಗೂ ಇನ್ನಿತರ ಅಧಿಕಾರಗಳಿವೆ. ಕಚೇರಿಗಳು ರದ್ದಾಗುವದರಿಂದ ಸಾಮಾನ್ಯ ಜನರು ಬೆಂಗಳೂರಿಗೆ ದೌಡಾಯಿಸುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಜನವಿರೋಧಿ ನಿರ್ಧಾರವನ್ನು ರಾಜ್ಯ ಸರಕಾರ ಕೈಕೊಳ್ಳಬಾರದೆಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next