Advertisement

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

10:52 AM May 02, 2024 | Team Udayavani |

ವಾಷಿಂಗ್ಟನ್:‌ ಅಮೆರಿಕದಾದ್ಯಂತ ಯೂನಿರ್ವಸಿಟಿಗಳಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ತೀವ್ರವಾಗಿದ್ದು, ನ್ಯೂಯಾರ್ಕ್‌ ಸಿಟಿ ಪೊಲೀಸರು ಕೊಲಂಬಿಯಾ ಯೂನಿರ್ವಸಿಟಿ ಮತ್ತು ಸಿಟಿ ಕಾಲೇಜಿನ ಸುಮಾರು 300 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಕ್ಯಾಲಿಫೋರ್ನಿಯಾ ಯೂನಿರ್ವಸಿಟಿಯಲ್ಲಿ ಘರ್ಷಣೆ ನಡೆಸಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗೆ ಯೂನಿರ್ವಸಿಟಿ ಆವರಣದಲ್ಲಿ ತಾತ್ಕಾಲಿಕ ಟೆಂಟ್‌ ನಿರ್ಮಿಸಿ ಪ್ರತಿಭಟನೆ ನಡೆಯುತ್ತಿರುವುದು ಹೆಚ್ಚಳವಾಗುತ್ತಿದೆ.

ತಕ್ಷಣವೇ ಗಾಜಾ ಯುದ್ಧ ನಿಲ್ಲಿಸಬೇಕೆಂದು ಒತ್ತಾಯಿಸಿರುವ ವಿದ್ಯಾರ್ಥಿಗಳು ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ಇತರ ದೇಶಗಳಿಗೂ ವಿಸ್ತರಣೆಯಾಗತೊಡಗಿದೆ ಎಂದು ವರದಿ ತಿಳಿಸಿದೆ.

ಮ್ಯಾನ್‌ ಹಟ್ಟನ್‌ ನ ಫೋರ್ದಾಮ್‌ ಯೂನಿರ್ವಸಿಟಿಯೊಳಗೆ ಆಗಮಿಸಿರುವ ನ್ಯೂಯಾರ್ಕ್‌ ಪೊಲೀಸ್‌ ಅಧಿಕಾರಿಗಳು ಆವರಣದೊಳಗೆ ತಾತ್ಕಾಲಿಕ ಟೆಂಟ್‌ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next