Advertisement

ಹಲ್ಲೆ ಖಂಡಿಸಿ ವಕೀಲರಿಂದ ಪ್ರತಿಭಟನೆ

01:27 PM May 17, 2022 | Team Udayavani |

ಜೇವರ್ಗಿ: ಬಾಗಲಕೋಟೆಯಲ್ಲಿ ವಕೀಲೆ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ವ್ಯಕ್ತಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ಸೋಮವಾರ ತಾಲೂಕು ವಕೀಲರ ಸಂಘದ ವತಿಯಿಂದ ತಹಶೀಲ್ದಾರ್‌ ವಿನಯಕುಮಾರ ಪಾಟೀಲ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Advertisement

ಸಾರ್ವಜನಿಕ ಸ್ಥಳದಲ್ಲಿ ವಕೀಲರು ಹೆಣ್ಣು ಎನ್ನುವುದನ್ನು ನೋಡದೇ ಮನಸ್ಸೋ ಇಚ್ಛೆ ಹಲ್ಲೆ ಮಾಡಿ, ಥಳಿಸಿರುವುದು ನಿಜಕ್ಕೂ ಮಾನವ ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ. ಇದೊಂದು ರಾಜಕೀಯ ಪ್ರೇರಿತ ಘಟನೆಯಾಗಿದೆ. ಇಂತಹ ಘಟನೆಗಳು ಮಹಿಳೆಯರ ಗೌರವಕ್ಕೆ ಕಪ್ಪು ಚುಕ್ಕೆಯಾಗಿದೆ. ಮಹಿಳೆಯರ ಮೇಲೆ, ವಿದ್ಯಾರ್ಥಿನಿಯರ ಮೇಲೆ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಬಂಧಿತ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು. ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಕೀಲರ ಸಂಘ ಮನವಿ ಪತ್ರದಲ್ಲಿ ಎಚ್ಚರಿಸಿದೆ.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಕೆ.ಜಿ.ಬಿರಾದಾರ, ಹಿರಿಯ ವಕೀಲರಾದ ಪ್ರಾಣೇಶ ಕುಲಕರ್ಣಿ, ಸಿದ್ಧು ಯಂಕಂಚಿ, ಎಂ.ಐ.ಸೂಗೂರ, ಸಿದ್ಧು ದೇಸಾಯಿ, ರಾಮನಾಥ ಭಂಡಾರಿ, ಭಾಷಾ ಪಟೇಲ ಯಾಳವಾರ, ಕಾಶಿಂ ಮನಿಯಾರ್‌, ಅಪ್ಪಾಸಾಬ ಕೋಳಕೂರ, ಎಸ್‌.ಎಸ್‌. ಹಾಲಕಾಯಿ, ರಾಜು ಮುದ್ದಡಗಿ, ಸೋಮಶೇಖರ ಸರ್ದಾರ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next