Advertisement

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರಿಂದ ಪ್ರತಿಭಟನೆ

03:52 PM Feb 11, 2020 | Team Udayavani |

ಬಂಕಾಪುರ: ವೇತನ ತಾರತಮ್ಯ ಸರಿಪಡಿಸುವುದು, 2ನೇ ಹೆಚ್ಚುವರಿ ವೇತನ ಬಡ್ತಿ ಮಂಜೂರಾತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೋಮವಾರ ರಾಜ್ಯ ವ್ಯಾಪ್ತಿಯಲ್ಲಿ ನಡೆಯುವ ಮೌನ ಪ್ರತಿಭಟನೆಗೆ ಬೆಂಬಲಿಸಿ, ಪಟ್ಟಣದ ಕೀರ್ತಿ ಪಪೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಕಪ್ಪುಬಟ್ಟೆ ಕಟ್ಟಿಕೊಂಡಿ ಪ್ರತಿಭಟನೆ ನಡೆಸಿದರು.

Advertisement

ಉಪನ್ಯಾಸಕರ ಕಾರ್ಯಭಾರ ಕುರಿತು ಉನ್ನತ ಮಟ್ಟದ ಪರಿಷತ್‌ ರಚಿಸಬೇಕು. ಪ್ರತಿ ಉಪನ್ಯಾಸಕರಿಗೆ 16 ಗಂಟೆ ಬೋಧನಾ ಅವಧಿ  ಮುಂದುವರಿಸಬೇಕು. ಪದೋನ್ನತಿ ಹೊಂದಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುವವರಿಗೆ ಕಾಲಮಿತಿ ಬಡ್ತಿ ಮಂಜೂರು ಮಾಡಿ, ಪ್ರತಿ ತರಗತಿಗೆ ವಿದ್ಯಾರ್ಥಿಗಳ ಸಂಖ್ಯೆಯನ್ನು 80 ರಿಂದ 40 ಕ್ಕೆ ನಿಗದಿಪಡಿಸಬೇಕು. ನೆಟ್‌, ಸ್ಲೆಟ್‌, ಪಿಎಚ್‌ಡಿ ಅರ್ಹತೆ ಪಡೆದವರಿಗೆ ಪದವಿ ಕಾಲೇಜಿಗೆ ಬಡ್ತಿ ನೀಡಬೇಕು. ಪಬ್ಲಿಕ್‌ ಕಾಲೇಜುಗಳ ಸಮಸ್ಯೆಯನ್ನು ಬಗೆಹರಿಸಬೇಕು. ಅನುದಾನಿತ ಉಪನ್ಯಾಸಕರ ಕಾಲ್ಪನಿಕ ವೇತನ ಸಮಸ್ಯೆ ಬಗೆಹರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಮನವಿಯಲ್ಲಿ ಅಗ್ರಹಿಸಲಾಗಿದೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ 2020ರ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ ಬಹಿಷ್ಕರಿಸಬೇಕಾಗುತ್ತದೆ ಎಂದು ಸರಕಾರಕ್ಕೆ ಮನವಿ ನೀಡಲಾಗಿದೆ.

ಪ್ರಭಾರಿ ಪ್ರಾಚಾರ್ಯ ಎಂ.ಎಸ್‌.ಕನ್ನಕನವರ, ಎಸ್‌. ಬಿ.ಕುರಬರ, ಎಸ್‌.ಆರ್‌.ಕಾರಗಿ, ಜಗದೀಶ ಪುರದ, ಎಂ.ಆರ್‌.ಅಶೋಕ, ಶಿವಾನಂದ ಗೌಡರ, ಯಲ್ಲಪ್ಪ ಹುಲ್ಲತ್ತಿಯವರ ಹಾಗೂ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next