Advertisement

31ರಂದು ಡೀಸಿ ಕಚೇರಿ ಮುಂದೆ ಪ್ರತಿಭಟನೆ

10:13 PM Jan 25, 2020 | Team Udayavani |

ಬೆಂಗಳೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅ. 31 ರಂದು ಬೆಳಗ್ಗೆ 10.30ಕ್ಕೆ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಕೇಂದ್ರ ಸರ್ಕಾರ 15 ದೇಶಗಳೊಂದಿಗೆ ಸೇರಿ  ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದಲ್ಲಿ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಚಿಂತಿಸಿದ್ದು, ಒಪ್ಪಂದಕ್ಕೆ ಸಹಿ ಹಾಕಿದರೆ ನಮ್ಮ ಆಹಾರ ಮತ್ತು ಕೃಷಿ  ಕ್ಷೇತ್ರವು ನಷ್ಟಕ್ಕೆ ಗುರಿಯಾಗಲಿದೆ.

ಬಹುತೇಕ ಕೃಷಿ ಉತ್ಪನ್ನಗಳ ಮೇಲೆ ಆಮದು ಸುಂಕವನ್ನು ಶಾಶ್ವತವಾಗಿ ಶೂನ್ಯಕ್ಕೆ ತರಲಾಗುತ್ತದೆ. ಇದೇ ಸಮಯದಲ್ಲಿ  ಅನೇಕ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ನೋಡುತ್ತಿದ್ದು, ಇದರಿಂದ ನಮ್ಮ ದೇಶದ ಕೋಟ್ಯಂತರ ಸಣ್ಣ  ರೈತರ ಹಾಗೂ ಮಹಿಳೆಯರ ಜೀವನೋಪಾಯವನ್ನು ಬೆಂಬಲಿಸುವ ಹೈನುಗಾರಿಕೆ ಕ್ಷೇತ್ರಕ್ಕೆ ತೀವ್ರ ಅಪಾಯ ಒದಗಲಿದೆ ಎಂದರು.

ನೆರೆ ಸಂತ್ರಸ್ತರ  ಸಮಸ್ಯೆಗಳನ್ನು ಪರಿಹರಿಸುವ ಕಡೆ ಗಮನ ಹರಿಸದೆ ತಿರಸ್ಕಾರ ಮನೋಭಾವನೆಯಿಂದ ನೋಡುತ್ತಿರುವುದನ್ನು ವಿರೋಧಿಸಿ ನ. 7ರಂದು ಬೆಳಗ್ಗೆ 11ಕ್ಕೆ ಸಿಎಂ  ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next