ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಪ್ರವಾದಿ ಮೊಹಮ್ಮದ್ ಅವರ ಕುರಿತಾಗಿ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಅವರ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ಪ್ರತಿಭಟನೆಗಳು, ಹಿಂಸಾಚಾರ ನಡೆದ ಹಿನ್ನೆಲೆ ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಡಿಜಿಪಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.
ಡಿಜಿಪಿ ಪ್ರವೀಣ್ ಪ್ರವೀಣ್ ಸೂದ್ ಹಾಗೂ ಹೋಮ್ ಸೆಕ್ರೆಟರಿ ರಜನೀಶ್ ಗೋಯಲ್ ಜತೆ ಸಿಎಂ ತುರ್ತು ಸಭೆ ನಡೆಸಿದರು. ಎಲ್ಲೆಲ್ಲಿ ರಾಜ್ಯದಲ್ಲಿ ಸೂಕ್ಷ್ಮ ಪ್ರದೇಶಗಳಿವೆಯೋ ಅಲ್ಲೆಲ್ಲಾ ಸೂಕ್ತ ಎಚ್ಚರಿಕೆ ಕ್ರಮ ಕೈಗೊಳ್ಳಿ. ಎಲ್ಲೂ ಕೂಡಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬರಬಾರದು. ಎಲ್ಲಾ ಎಸ್ಪಿಗಳ ಜೊತೆ ಮಾತನಾಡಿ ಎಂದು ಸಿಎಂ ಡಿಜಿಪಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಮಳಲಿ ಮಸೀದಿ ವಿವಾದ: ವಿಚಾರಣೆ ಮತ್ತೆ ಮುಂಡೂಡಿಕೆ
ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಶುಕ್ರವಾರ ಪ್ರಾರ್ಥನೆಯ ಬಳಿಕ ಮುಸ್ಲಿಮರು ಬೃಹತ್ ಪ್ರತಿಭಟನೆ ನಡೆಸಿದ್ದು, ಉತ್ತರ ಪ್ರದೇಶದಲ್ಲಿ ಹಿಂಸಾಚಾರ ನಡೆದ ಬಗ್ಗೆ ವರದಿಯಾಗಿದೆ.
ರಾಜ್ಯದಲ್ಲಿ ಕಲಬುರಗಿ, ಮೈಸೂರು ಸೇರಿ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದು, ಎಲ್ಲಿಯೂ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗಿಲ್ಲ.