Advertisement

ಟಿಇಟಿ ಅಭ್ಯರ್ಥಿಗಳಿಂದ ಇಂದು ಪ್ರತಿಭಟನೆ

11:53 PM Apr 01, 2019 | Team Udayavani |

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ನಡೆಸಿದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯ 13 ಪ್ರಶ್ನೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಗೊಂದಲ ಬಗೆಹರಿಸುವಂತೆ ಕೋರಿ ಏ.2ರಂದು ನೊಂದ ಅಭ್ಯರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Advertisement

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಯಾವುದೇ ರೀತಿಯಲ್ಲೂ ಸಂಚಾರಕ್ಕೆ ತೊಂದರೆ ಮಾಡದಂತೆ ಪ್ರತಿಭಟನೆ ನಡೆಸಲು ಹಲಸೂರು ಪೊಲೀಸ್‌ ಠಾಣೆಯಿಂದ ಅನುಮತಿ ಪಡೆದುಕೊಂಡಿದ್ದೇವೆ. ಮೈಸೂರು ಬ್ಯಾಂಕ್‌ ವೃತ್ತದಲ್ಲಿರುವ ಕೇಂದ್ರೀಕೃತ ದಾಖಲಾತಿ ಘಟಕದ ಎದುರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಅಭ್ಯರ್ಥಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಶಿಕ್ಷಕರ ಅರ್ಹತೆಯಲ್ಲಿ ಕೇಳಲಾದ ಪ್ರಶ್ನೆಗಳ ಪೈಕಿ, 13 ಪ್ರಶ್ನೆಗಳು ಮತ್ತು ಅದಕ್ಕೆ ನೀಡಿದ ಉತ್ತರ ಗೊಂದಲಮಯವಾಗಿತ್ತು. ಸರಿ ಉತ್ತರ ಬರೆದವರಿಗೂ ಕೇಂದ್ರೀಕೃತ ದಾಖಲಾತಿ ಘಟಕದಿಂದ ಅಂಕಗಳು ಸಿಗಲಿಲ್ಲ. ಇದರಿಂದ ಹಲವರ ಭವಿಷ್ಯ ಅತಂತ್ರವಾಗಿದೆ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದೇವೆ. ಏ.2ರಂದು ಸಮಸ್ಯೆಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ಏ.3ರಂದೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next