Advertisement

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಳೆ ಪ್ರತಿಭಟನೆ

11:08 AM Jun 26, 2019 | Team Udayavani |

ಹಿರೇಕೆರೂರ: ರಟ್ಟೀಹಳ್ಳಿ ಹಾಗೂ ಹಿರೇಕೆರೂರ ತಾಲೂಕುಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂ.27 ರಂದು ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಬಿಜೆಪಿ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಯು.ಬಿ. ಬಣಕಾರ ಹೇಳಿದರು.

Advertisement

ಪಟ್ಟಣದ ತಮ್ಮ ನಿವಾಸದಲ್ಲಿ ಬಿಜೆಪಿ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಿರೇಕೆರೂರು-ರಟ್ಟೀಹಳ್ಳಿ ತಾಲೂಕಿನ 2019-20ನೇ ಸಾಲಿನ ಮುಂಗಾರು ಹಂಗಾಮು ಸಂಪೂರ್ಣವಾಗಿ ವಿಫಲವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿಗಳಾಗಲಿ ತಾಲೂಕುಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಸಮಸ್ಯೆ ಅರಿಯುವಂತಹ ಹಾಗೂ ಪರಿಹಾರ ಒದಗಿಸುವ ಪ್ರಯತ್ನವನ್ನು ಇವತ್ತಿನವರೆಗೂ ಮಾಡಿಲ್ಲ ಎಂದು ದೂರಿದರು.

ಮಂಗಾರು ಹಂಗಾಮು ಪ್ರಾರಂಭವಾಗಿ ತಿಂಗಳು ಕಳೆದರೂ ಬಿತ್ತನೆ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಆದರೂ ಕೆಲವು ರೈತರು ಅರೆ-ಬರೆ ಮಳೆಯಲ್ಲಿ ಹತ್ತಿ, ಗೋವಿನ ಜೋಳವನ್ನು ಬಿತ್ತನೆ ಮಾಡಿದ್ದಾರೆ. ಸಕಾಲಕ್ಕೆ ಮಳೆ ಬಾರದೇ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಅನೇಕ ಗ್ರಾಮ ಪಂಚಾಯತಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕೆಲಸ ನೀಡದೇ, ಯೋಜನೆ ಜಾರಿಗೊಳಿಸುವಲ್ಲಿ ವಿಫಲವಾಗಿರುವುದು ಹಾಗೂ ಎರಡು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಪರಿಹರಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಒತ್ತಾಯಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಜೂ.27 ರಂದು ಪಟ್ಟಣದ ಸರ್ವಜ್ಞ ವೃತ್ತದಿಂದ ಮೆರವಣಿಗೆ ಮೂಲಕ ತಹಶೀಲ್ದಾರ್‌ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಸ್‌.ಆರ್‌. ಅಂಗಡಿ, ಜಿಪಂ ಸದಸ್ಯ ಶಿವರಾಜ ಹರಿಜನ, ಕೆಎಂಎಫ್‌ ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ಮುಖಂಡರಾದ ಮಹೇಶ ಗುಬ್ಬಿ, ಷಣ್ಮುಖಯ್ಯ ಮಳಿಮಠ, ಆನಂದಪ್ಪ ಹಾದಿಮನಿ, ಎಸ್‌.ಬಿ.ಪಾಟೀಲ, ನಿಂಗಪ್ಪ ಚಳಗೇರಿ, ಕಂಠಾಧರ ಅಂಗಡಿ, ರಮೇಶ ಕೋಡಿಹಳ್ಳಿ, ಶಿವಕುಮಾರ ತಿಪ್ಪಶಟ್ಟಿ, ಬಸವರಾಜ ಬೇವಿನಹಳ್ಳಿ, ವೀರಬಸಪ್ಪ ಮತ್ತೂರ, ಸುನೀತಾ ಕೊಡ್ಲೇರ, ನಿರ್ಮಲಾ ಗುಬ್ಬಿ, ಬೀರೇಶ ಹಾರ್ನಳ್ಳಿ, ಲಕ್ಷ ್ಮಣ ಯತ್ತಿಹಳ್ಳಿ ಸೇರಿದಂತೆ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next