Advertisement

ರಾಜ್ಯದ ಎಲ್ಲಾ ಡೀಸಿ ಕಚೇರಿ ಮುಂದೆ ನಾಳೆ ಪ್ರತಿಭಟನೆ

11:11 PM Aug 24, 2019 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂ.ನೆರೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಆ.26ರಂದು ಬೆಳಗ್ಗೆ 10.30ಕ್ಕೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ನಿರ್ಧರಿಸಿದೆ.

Advertisement

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ರಾಜ್ಯದಲ್ಲಿನ ನೆರೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. 4,394 ಹಳ್ಳಿಗಳು ಜಲಪ್ರಳಯಕ್ಕೆ ತುತ್ತಾಗಿದ್ದು, ಒಂದು ಲಕ್ಷ ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ. ಆದರೆ, ಕೇಂದ್ರ ಸರ್ಕಾರ ಈವರೆಗೂ ಒಂದು ರೂಪಾಯಿ ಪರಿಹಾರ ನೀಡಿಲ್ಲ.

ಕೇರಳ ಮತ್ತು ತಮಿಳುನಾಡಿಗೆ ಸಾವಿರಾರು ಕೋಟಿ ರೂ. ನೀಡುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ಹಣ ನೀಡದೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಬೆಳೆ ಮತ್ತು ಆಸ್ತಿ ನಷ್ಟದ ಬಗ್ಗೆ ವೈಜ್ಞಾನಿಕವಾಗಿ ಲೆಕ್ಕ ಹಾಕಿ ಸಹಾಯಹಸ್ತ ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 40 ಸಾವಿರ ಕೋಟಿ ರೂ.ನಷ್ಟ ಸಂಭವಿಸಿದೆ. 10 ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ನೀಡುವ ನಿರೀಕ್ಷೆಯಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next