Advertisement

ಕೋವಿಡ್ ನಿರ್ಬಂಧ ಎಲ್ಲರಿಗೂ ಅನ್ವಯ, ಉಲ್ಲಂಘಿಸಿದರೆ ಕಾನೂನು ಕ್ರಮ: ಸಚಿವ ಆರಗ ಜ್ಞಾನೇಂದ್ರ

01:43 PM Jan 06, 2022 | Team Udayavani |

ಬೆಂಗಳೂರು: ರಾಜ್ಯ ಸರಕಾರವು ಸಾರ್ವಜನಿಕ ಹಿತಾಸಕ್ತಿಯಿಂದ ವಿಧಿಸಿರುವ ಕೋವಿಡ್ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಹಾಗೂ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದ್ದು, ಕಾಂಗ್ರೆಸ್ ನಾಯಕರ ಉದ್ದೇಶಿತ ಪಾದಯಾತ್ರೆ ಕಾರ್ಯಕ್ರಮದ ಬಗ್ಗೆ ಮರು ಆಲೋಚಿಸಿ, ಮುಂದಕ್ಕೆ ಹಾಕುವಂತೆ, ಕಿವಿ ಮಾತು ಹೇಳಿದರು.

ರಾಜ್ಯದಲ್ಲಿ ಅದರಲ್ಲಿಯೂ ವಿಶೇಷವಾಗಿ ರಾಜಧಾನಿ ಬೆಂಗಳೂರು ನಗರದಲ್ಲಿ, ಕೋವಿಡ್ ಪ್ರಕರಣಗಳು ಆತಂಕಕಾರಿ ಯಾಗಿ, ಉಲ್ಬಣಗೊಳ್ಳುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕಾಗಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಅವರು ಹಿರಿಯರು, ತಮಗಿರುವ ಅನುಭವ ಹಾಗೂ ಹಿರಿತನದ ಹಿನ್ನೆಲೆಯಲ್ಲಿ ಸರಕಾರದ ಕಾಳಜಿಯನ್ನು ಅರ್ಥೈಸಿ ಕೊಳ್ಳಬೇಕು ಎಂದು ವಿನಂತಿಸಿದರು.

ಕೋವಿಡ್ ಮಹಾಮಾರಿ ಭೀತಿಯ ಹಿನ್ನೆಲೆಯಲ್ಲಿ, ನಗರದಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮೂರು ದಿನಗಳ ಪಕ್ಷದ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಕೊಳ್ಳಲಾಗಿದೆ. ಕಾಂಗ್ರೆಸ್ ಸಹ ತಮ್ಮ ಕಾರ್ಯಕ್ರಮ ಮುಂದೂಡಲಿ ಎಂದು ಸಲಹೆ ನೀಡಿದರು. ಕೋವಿಡ್ ತಡೆಗಟ್ಟುವ ಸಲುವಾಗಿ ಸರಕಾರದ ಜೊತೆಗೆ ಕೈ ಜೋಡಿಸಿ ಸಹಕರಿಸಬೇಕು ಎಂದೂ ಸಚಿವರು ಸಾರ್ವಜನಿಕರಿಗೆ ಮನವಿ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next