Advertisement
ಮಹಾರಾಷ್ಟ್ರ ಚುನಾವಣ ಪ್ರಚಾರದ ವೇಳೆ ಮಾಡಿರುವ ಭಾಷಣದ ತುಣುಕನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಸಿಎಂ, “ನಮ್ಮ ಗ್ಯಾರಂಟಿಗಳ ಬಗ್ಗೆ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಾರಾಷ್ಟ್ರ ಸರಕಾರ ಸುಳ್ಳು ಹೇಳುತ್ತಿದೆ. ಕರ್ನಾಟಕ ಸರಕಾರ ಯಾವ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿಲ್ಲ. ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಕಾರ್ಯಕ್ರಮಗಳನ್ನು ಮಾಡಿಲ್ಲ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆಯೇ ಇಲ್ಲವೇ ಎಂಬುದನ್ನು ಬಂದು ನೋಡಲಿ. ಅವರಿಗೆ ಬಸ್, ವಿಮಾನ ಮಾಡಿಕೊಡುತ್ತೇವೆ. ಕರ್ನಾಟಕದ ಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ನಾನು ಸುಳ್ಳು ಹೇಳಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಇವರು ಸುಳ್ಳು ಹೇಳಿದ್ದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ. ಬಿಜೆಪಿ ಹಾಗೂ ಬಿಜೆಪಿ ಸರಕಾರದ ಮೇಲೆ ಮೊಕದ್ದಮೆ ದಾಖಲಿಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಎಚ್ಚರಿಕೆ ನೀಡಿದರು.
ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಕರ್ನಾಟಕಕ್ಕೆ ಬಂದು ನೋಡಿ
ಮೋದಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ನಾನೇ ಕಲ್ಪಿಸುವೆ
ಆರೋಪ ಸಾಬೀತುಪಡಿಸಿದರೆ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ
ಆರೋಪ ಸಾಬೀತು ಮಾಡದಿದ್ದರೆ ಬಿಜೆಪಿಯವರು ಮಹಾರಾಷ್ಟ್ರದ ಜನತೆಯ ಕ್ಷಮೆ ಕೇಳಲಿ
ಬಿಜೆಪಿ ಪಕ್ಷ ಹಾಗೂ ಬಿಜೆಪಿ ಸರಕಾರದ ಮೇಲೆ ಮೊಕದ್ದಮೆ ದಾಖಲಿಸಲು ಕೆಪಿಸಿಸಿ ತೀರ್ಮಾನಿಸಿದೆ ಪ್ರಧಾನಿ ಮೋದಿ ಮತ್ತು ಬಿಜೆಪಿಯ ಸುಳ್ಳಿನ ಸರದಾರರೇ, ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡು ತ್ತೇನೆ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡುತ್ತೇನೆ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರು ವುದು ಸತ್ಯ. ಆದರೆ ನಿಮ್ಮ ಸುಳ್ಳಿನ ಜಾಹೀರಾತನ್ನು ವಾಪಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ?
Related Articles
Advertisement