Advertisement

ಅತಿವೃಷ್ಟಿಗೆ ಹಾಳಾದ ಬೆಳೆಗೆ ಪರಿಹಾರ ನೀಡಿ

05:38 PM Aug 25, 2020 | Suhan S |

ಭಾಲ್ಕಿ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾಳಾದ ಹೆಸರು ಸೇರಿದಂತೆ ಇತರ ಬೆಳೆಗಳಿಗೆ ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಿ ರೈತ ಸಮುದಾಯದ ನೆರವಿಗೆ ಮುಂದಾಗಬೇಕು ಎಂದು ರೈತ ಸಂಘದ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಆಗ್ರಹಿಸಿದರು.

Advertisement

ಪಟ್ಟಣದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ, ರೈತ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದಾಗಿ ಊಳುವವನೇ ಭೂಮಿಯ ಒಡೆಯ ಎಂಬ ಪರಿಕಲ್ಪನೆಗೆ ತಿಲಾಂಜಲಿ ಇಟ್ಟು, ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುವ ಕಾಯ್ದೆ ರೂಪಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಸಣ್ಣ ಹಿಡುವಳಿ ರೈತರೇ ಹೆಚ್ಚಿನ ಸಂಖೆಯಲ್ಲಿದ್ದು, ಅವರ ಬದುಕು ಬೀದಿಗೆ ಬೀಳಲಿದೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಗಾರರ ಕೃಷಿ ಸಂಸ್ಕೃತಿ ಬೆಳೆಯುತ್ತಲಿದೆ. ಹಾಗಾಗಿ ಇಂತಹ ರೈತ ವಿರೋ ಧಿ ಕಾಯ್ದೆಯನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗೆ ತಗುಲುವ ವೆಚ್ಚ ಹೆಚ್ಚಿದ್ದು ಕಾರ್ಖಾನೆಗಳು ಎಫ್‌ಆರ್‌ಪಿ ದರವನ್ನು ಹೆಚ್ಚಿಸಬೇಕು. ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್‌ ಖಾಸಗೀಕರಣ ಮಾಡಬಾರದು. ಸರ್ಕಾರದ ರೈತ ವಿರೋಧಿ ನಡೆಯನ್ನು ಸಂಘ ಖಂಡಿಸುತ್ತದೆ. ರೈತರಿಗೆ ನ್ಯಾಯ ದೊರಕಿಸಲು ರಾಜ್ಯ ಮಟ್ಟದಿಂದ ಎಲ್ಲ ಹಂತದವರೆಗೆ ಹೋರಾಟ ಮಾಡಲು ಮುಂದಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನೂತನ ಪದಾಧಿಕಾರಿಗಳು: ಸಿದ್ರಾಮಪ್ಪ ಆಣದೂರೆ (ಜಿಲ್ಲಾಧ್ಯಕ್ಷ), ಶ್ರೀಮಂತ ಬಿರಾದರ (ಕಾರ್ಯಾಧ್ಯಕ್ಷ), ದಯಾನಂದ ಸ್ವಾಮಿ (ಪ್ರಧಾನ ಕಾರ್ಯದರ್ಶಿ) ಪದಗ್ರಹಣ ಸ್ವೀಕರಿಸಿದರು. ಹಿರೇಮಠದ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಪ್ರಮುಖರಾದ ಭತ್ತರಹಳ್ಳಿ ಭೈರೇಗೌಡ, ಕಾರ್ತಿಕ, ಶೇಷಾರಾವ್‌ ಕಣಜಿ, ಬಾಬುರಾವ್‌ ಜೋಳದಪಕೆ, ಸತ್ಯವಾನ ಪಾಟೀಲ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next