Advertisement

ಇ-ಸ್ವತ್ತಿನ ಸಮಸ್ಯೆಗೆ ಶೀಘ್ರ ಪರಿಹಾರ ನೀಡಿ

02:48 PM Sep 30, 2019 | Team Udayavani |

ಕುಮಟಾ: ಜಿಲ್ಲೆಯ ಜ್ವಲಂತ ಸಮಸ್ಯೆಗಳಲ್ಲೊಂದಾದ ಇ-ಸ್ವತ್ತಿನ ಸಮಸ್ಯೆಯನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರವೇ ಪರಿಹಾರ ಒದಗಿಸಿಕೊಡುವಂತೆ ಶಾಸಕ ದಿನಕರ ಶೆಟ್ಟಿ ಅವರು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಬಳಿ ಒತ್ತಾಯಿಸಿದರು.

Advertisement

ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಬರಮಾಡಿಕೊಂಡ ಅವರು, ಜಿಲ್ಲೆಯ ಹಲವು ಸಮಸ್ಯೆಗಳ ಬಗ್ಗೆ ಗಮನಸೆಳೆದರು. ತಾಲೂಕಿನ ಗೋಕರ್ಣ ಸಮೀಪದ ತದಡಿಯ ಗಜನಿ ಪ್ರದೇಶದಲ್ಲಿನ 1800 ಎಕರೆ ಜಾಗದಲ್ಲಿ ಕೈಗಾರಿಕೋದ್ಯಮ ಅಭಿವೃದ್ಧಿ ಪಡಿಸುವ ಕುರಿತು ಚರ್ಚಿಸಿದರು.

ಅದಲ್ಲದೇ, ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅವಶ್ಯವಾಗಿರುವ ಮರಳು ಸರಿಯಾದ ಪ್ರಮಾಣದಲ್ಲಿ ದೊರೆಯುತ್ತಿಲ್ಲ. ಇಂತಹ ಹಲವು ಸಮಸ್ಯೆಗಳಿಗೆ ಸಂಬಂಧಪಟ್ಟವರ ಜೊತೆ ಚರ್ಚಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ವಿನಂತಿಸಿಕೊಂಡರು. ನಂತರ ಪ್ರತಿಕ್ರಿಯಿಸಿದ ಸಚಿವ ಜಗದೀಶ ಶೆಟ್ಟರ್‌, ಜಿಲ್ಲೆಯ ಇ-ಸ್ವತ್ತಿನ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಜೊತೆ ಚರ್ಚಿಸುತ್ತೇನೆ.

ಇನ್ನಿತರ ಸಮಸ್ಯೆಗಳ ಬಗ್ಗೆ ಹಂತಹಂತವಾಗಿ ಪರಿಹರಿಸಲಾಗುವುದು ಎಂದರು. ಬಿಜೆಪಿ ಪ್ರಮುಖರಾದ ವಿನೋದ ಪ್ರಭು, ಮಂಡಲಾಧ್ಯಕ್ಷ ಕುಮಾರ ಮಾರ್ಕಾಂಡೆ, ನಾಗರಾಜ ನಾಯ್ಕ ತೊರ್ಕೆ, ಎಂ.ಜಿ.ಭಟ್ಟ, ತಾಲೂಕು ಉಸ್ತುವಾರಿ ನಾಗರಾಜ ನಾಯಕ, ಪ್ರಶಾಂತ ನಾಯ್ಕ, ಜಿ.ಪಂ ಸದಸ್ಯ ಗಜಾನನ ಪೈ, ವಿಶ್ವನಾಥ ನಾಯ್ಕ, ವಿನಾಯಕ ಭಟ್ಟ ಸಂತೇಗುಳಿ, ಮಹೇಶ ನಾಯ್ಕ, ಪುರಸಭಾ ಸದಸ್ಯರಾದ ಸಂತೋಷ ನಾಯ್ಕ, ಅನಿಲ ಹರ್ಮಲಕರ, ಅಂಕೋಲಾ ಘಟಕದ ಪ್ರಮುಖರಾದ ಭಾಸ್ಕರ ನಾರ್ವೇಕರ ಸೇರಿದಂತೆ ಹಲವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next