Advertisement

ಹಾಸ್ಟೆಲ್‌ಗ‌ಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ: ಜಿ.ಪಂ. ಸಿಇಒ ಸೂಚನೆ

02:04 AM Jun 09, 2022 | Team Udayavani |

ಉಡುಪಿ: ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ, ಅವರು ಉತ್ತಮ ಶಿಕ್ಷಣ ಪಡೆಯುವಂತೆ ಮಾಡುವುದು ನಿಲಯ ಪಾಲಕರ ಜವಾಬ್ದಾರಿ ಎಂದು ಜಿ.ಪಂ. ಸಿಇಒ ಪ್ರಸನ್ನ ಎಚ್‌. ಸೂಚಿಸಿದರು.

Advertisement

ಜಿ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲೆಯ ಎಲ್ಲ ಹಾಸ್ಟೆಲ್‌ ನಿಲಯ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕಾರ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲ ಕ್ಕಾಗಿ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಮೂಲಕ ವಿದ್ಯಾರ್ಥಿನಿಲಯಗಳ ಸೌಲಭ್ಯ ಕಲ್ಪಿಸಿ ಉತ್ತಮ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಟ್ಟಿದೆ. ಇದರ ಸದುಪಯೋಗ ಆಗಬೇಕು ಎಂದರು.

ನಿಯಮ ಪಾಲನೆ ಕಡ್ಡಾಯ
ನಿಯಮ ಸರಕಾರ ಹಾಸ್ಟೆಲ್‌ಗ‌ಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಪಠ್ಯ ಪುಸ್ತಕ ಸೇರಿ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದೆ. ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹಿಂದೆ ಬೀಳದಂತೆ ಎಚ್ಚರ ವಹಿಸಬೇಕು. ಈ ಸಂಬಂಧ ಸರಕಾರ ರೂಪಿಸಿರುವ ಮಾರ್ಗಸೂಚಿ ಹಾಗೂ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾರ್ಥಿಗಳು ಮೊಬೈಲ್‌ ಬಳಕೆ ಮಾಡದಂತೆ ಕಟ್ಟೆಚ್ಚರ ವಹಿಸಬೇಕು ಎಂದರು.

ವಿದ್ಯಾರ್ಥಿಗಳು ನಿತ್ಯ ಶಾಲಾ ಕಾಲೇಜುಗಳಿಗೆ ಹಾಜರಾಗುವ ಬಗ್ಗೆ ಮತ್ತು ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಗೈರು ಹಾಜರಾಗುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದು ಈ ಬಗ್ಗೆ ಪರಿಶೀಲಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸಚಿನ್‌ ಕುಮಾರ್‌, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ದೂದ್‌ಪೀರ್‌ ಹಾಗೂ ಹಾಸ್ಟೆಲ್‌ಗ‌ಳ ನಿಲಯ ಪಾಲಕರು ಉಪಸ್ಥಿತರಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next