Advertisement

ಪಿ.ಹೊಸಹಳ್ಳಿಗೆ ಸಮರ್ಪಕ ಕುಡಿವ ನೀರು ಪೂರೈಸಿ

06:44 PM Apr 23, 2019 | Suhan S |

ಶ್ರೀರಂಗಪಟ್ಟಣ: ತಾಲೂಕಿನ ಪಿ.ಹೊಸಹಳ್ಳಿ ಗ್ರಾಮಕ್ಕೆ ಸಮರ್ಪಕ ನೀರು ಸರಬರಾಜಿಗೆ ಒತ್ತಾಯಿಸಿ ತಾಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಇಒ ಅರುಣ್‌ ಕುಮಾರ್‌ಗೆ ಮನವಿ ಪತ್ರ ಸಲ್ಲಿಸಿದರು.

Advertisement

ಗ್ರಾಮ ಮುಖಂಡ ಗೋವಿಂದರಾಜು ನೇತೃತ್ವದಲ್ಲಿ ಗ್ರಾಮಸ್ಥರು, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಬೇಸಿಗೆ ಕಾಲವಾದ್ದರಿಂದ ನೀರಿನ ಸಮಸ್ಯೆ ದಿನೇದಿನೆ ಬಿಗುಡಾಯಿಸುತ್ತಿದೆ. ಇದಕ್ಕೆಲ್ಲಾ ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲ. ಗ್ರಾಮದಲ್ಲಿ ಹಬ್ಬ ಹರಿದಿನಗಳಲ್ಲಿ ಮೋಟಾರ್‌ ಕೆಟ್ಟಿರುವ ಸಮಸ್ಯೆಗಳನ್ನು ಅಧಿಕಾರಿಗಳು ಹೇಳುತ್ತಾರೆ. ಮುನ್ನೆಚ್ಚರಿಕೆಯಿಂದ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದರು.

ಗ್ರಾಮದಲ್ಲಿರುವ ಕೊಳವೆ ಬಾವಿಗಳ ಮುಂದೆ ಮಹಿಳೆಯರು, ಮಕ್ಕಳು ನೀರಿಗಾಗಿ ಸರದಿಯಲ್ಲಿ ಕಾಯುವ ಪರಿಸ್ಥಿತಿ ಉಂಟಾಗಿದೆ. ಜೊತೆಗೆ ಬೇಸಿಗೆ ಬಿಸಿಲಿನ ಜಳಕ್ಕೆ ಗ್ರಾಮದಲ್ಲಿನ ಕೊಳವೆಬಾವಿಗಳು ಬತ್ತಿಹೋಗುತ್ತಿವೆ. ಗ್ರಾಮದಲ್ಲಿ ನೀರಿನ ದಾಹ ಹೆಚ್ಚಾಗುವ ಮುನ್ನವೇ ಗ್ರಾಪಂ ಮುನ್ನೆಚ್ಚರಿಕೆ ತೆಗೆದು ಕೊಳ್ಳಬೇಕು. ಹಲವು ಬಾರಿ ನೀರಿನ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮೌಖೀಕವಾಗಿ ತಿಳಿಸಿದರೂ ಕ್ರಮ ತೆಗೆದುಕೊಂಡಿಲ್ಲ. ಬಳಿಕ ಮನವಿ ಸಲ್ಲಿಸಿದರೂ ಅಧಿಕಾರಿಗಳು ಮನವಿಗೆ ಸ್ಪಂದಿಸದೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಬಳಿ ಕಾಡಿಬೇಡಿ ಸಾಕಾಗಿ ತಾಲೂಕು ಪಂಚಾಯಿತಿ ಮೆಟ್ಟಿಲು ಹತ್ತಿ ಬಂದು ಮನವಿ ನೀಡುತ್ತಿದ್ದೇವೆ. ನೀವಾದರೂ ಗ್ರಾಮದತ್ತ ಗಮನ ಹರಿಸಿ ಕೂಡಲೇ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಸಿ ಕುಡಿಯುವ ನೀರಿನ ಕೊರತೆ ನೀಗಿಸಬೇಕು ಎಂದು ಗ್ರಾಮ ಮುಖಂಡರಾದ ಪ್ರಮೋದ್‌, ಲಕ್ಷ್ಮಣ, ಶ್ರೀಧರ್‌, ನಂಜುಂಡಾಚಾರ್‌, ರಾಮೇಗೌಡ ಸೇರಿದಂತೆ ಇತರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹ ಣಾಧಿಕಾರಿ ಅರುಣ್‌ಕುಮಾರ್‌ಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next