Advertisement
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ತ್ತೈಮಾಸಿಕ ಕೆಪಿಡಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮುಂಗಾರು ಮಳೆಯಾಗಿಲ್ಲ. ಇಷ್ಟರಲ್ಲಿ ಮಳೆಯಾದರೆ ರೈತರಿಗೆ ಸಕಾಲಕ್ಕೆ ಬೀಜ ಮತ್ತು ರಸಗೊಬ್ಬರ ದೊರೆಯಬೇಕು ಎಂದು ತಾಕೀತು ಮಾಡಿದರು. ತಾವು ಶಾಸಕರಾದಾಗಿನಿಂದ ಅಂಗನವಾಡಿ ಮತ್ತು ಶಾಲಾ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾದರೂ ಇನ್ನು ಶಾಲೆಗಳಿಗೆ ಸಮರ್ಪಕ ಕಟ್ಟಡಗಳಿಲ್ಲದಿರುವುದು ನಾಚಿಕೆಗೇಡಿನ ಸಂಗತಿ. ಕೊಠಡಿಗಳ ಅಗತ್ಯತೆಯ ಕುರಿತು ಮೇಲಧಿಕಾರಿಗಳು ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸುವುದಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.
Related Articles
Advertisement
ಗುರುಮಠಕಲ್ ಆಸ್ಪತ್ರೆಯಲ್ಲಿ ಹಗಲಲ್ಲೇ ವೈದ್ಯರು ಇರಲ್ಲ ಎನ್ನುವ ಸಾಕಷ್ಟು ದೂರುಗಳು ಬರುತ್ತಿದ್ದು, ಅಧಿಕಾರಿಗಳು ಏನು ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದರು. ಸಹಾಯಕ ಕೃಷಿ ನಿರ್ದೇಶಕಿ ಶ್ವೇತಾ ಮಾತನಾಡಿ, ಜೂನ್ ತಿಂಗಳಲ್ಲಿ ತಾಲೂಕಿನಲ್ಲಿ 63 ಎಂ.ಎಂ. ಮಳೆಯಾಗಬೇಕಿತ್ತು. ಕೇವಲ 8 ಎಂ.ಎಂ. ಮಳೆಯಾಗಿದ್ದು, ಶೇ. 87ರಷ್ಟು ಕೊರೆತ ಮಳೆಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
54 ಸಾವಿರ ಹೆಕ್ಟೇರ್ ಬಿತ್ತನೆ ಗುರಿಯಿದ್ದು, 11 ಸಾವಿರ ಹೆಕ್ಟೇರ್ (ಶೇ.20) ಬಿತ್ತನೆಯಾಗಿದೆ ಎಂದು ವಿವರಿಸಿದರು. ಇದೇ ವೇಳೆ ರಸಗೊಬ್ಬರ ಕೊರೆತಯಾಗದಂತೆ ಕ್ರಮವಹಿಸಲು ಕೃಷಿ ಅಧಿಕಾರಿಗಳಿಗೆ ನಿರ್ದೇಶಿಸಿದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. ಈ ವೇಳೆ ತಹಶೀಲ್ದಾರ್ ಚನ್ನಬಸವ, ಯಾದಗಿರಿ ತಾಪಂ ಇಒ ಬಸವರಾಜ ಶರಭೈ, ಮುಖ್ಯಾಧಿಕಾರಿ ಲಕ್ಷ್ಮೀಬಾಯಿ, ತಾಲೂಕು ವೈದ್ಯಾಧಿಕಾರಿ ಹನುಮಂತರೆಡ್ಡಿ, ಸಿಡಿಪಿಒ ಭೀಮರಾಯ ಕಣ್ಣೂರ, ಬಿಒ ಚಂದ್ರಕಾಂತರೆಡ್ಡಿ, ಕೆಡಿಪಿ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.