Advertisement
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ತಾಲೂಕು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.
Related Articles
Advertisement
ಮಳೆಯಿಂದಾಗಿ ನೆರೆಗೆ ತುತ್ತಾದ ಗ್ರಾಮಗಳ ಸಾರ್ವಜನಿಕರನ್ನು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ರಕ್ಷಣಾ ತಂಡಗಳು ಕ್ಷಿಪ್ರ ಕಾರ್ಯಾಚರಣೆಗೆ ಮುಂದಾಗಬೇಕು. ಜನ ಜಾನುವಾರುಗಳ ಜೀವಹಾನಿ ತಪ್ಪಿಸಲು ತಾಲೂಕು ಆಡಳಿತದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅತಿವೃಷ್ಟಿ ಪರಿಸ್ಥಿತಿಗೆ ಅನುಸಾರ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಆರೋಗ್ಯ ತಪಾಸಣೆ ಹಾಗೂ ಅಗತ್ಯದ ಔಷಧಗಳು ಲಭ್ಯವಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
ತಾಲೂಕಿನ ಜಮಾಬಂದಿ ಕಾರ್ಯ ನಿರ್ವಹಿಸಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಕಂದಾಯ ಇಲಾಖೆಯ ಆಧಾರಸ್ತಂಭಗಳಾಗಿ ಕಾರ್ಯನಿರ್ವಹಿಸುತ್ತಾರೆ. ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇಲಾಖೆಗೆ ಹೆಸರು ತರಬೇಕು. ಗ್ರಾಮ ಲೆಕ್ಕಾಧಿಕಾರಿಗಳು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭ ಹೆಚ್ಚಾಗಿರುತ್ತದೆ. ಕೆಲಸದ ಒತ್ತಡದಿಂದ ಹೊರಬರಲು ನಿಯಮಿತವಾಗಿ ವ್ಯಾಯಾಮ ಹಾಗೂ ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಒತ್ತಡದ ಕೆಲಸವನ್ನು ಸಮರ್ಥವಾಗಿ ನಿಭಾಯಿಸಬಹುದು ಎಂದು ಎಂ. ಸುಂದರೇಶಬಾಬು ಅಭಿಪ್ರಾಯಪಟ್ಟರು.
ತಹಶೀಲ್ದಾರ್ ಆಶಪ್ಪ ಪೂಜಾರ ಮಾತನಾಡಿ, ಜಿಲ್ಲಾಧಿಕಾರಿಗಳ ಸೂಚನೆಯನ್ನು ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಚಾಚೂ ತಪ್ಪದೇ ಕಾರ್ಯರೂಪಕ್ಕೆ ತರಬೇಕು. ಅತಿವೃಷ್ಟಿ ನಿರ್ವಹಣೆಯಲ್ಲಿ ನಿಧಾನಗತಿ ಬೇಡ. ಸಾರ್ವಜನಿಕರಿಗೆ ತಕ್ಷಣವೇ ಸ್ಪಂದಿಸುವ ಕಾರ್ಯವನ್ನು ಎಲ್ಲರೂ ಮಾಡಬೇಕೆಂದರು.
ಸಭೆಯಲ್ಲಿ ಉದಯಕುಮಾರ ಎಲಿವಾಳ, ರಂಜಿತಾ ತಳಗೇರಿ, ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಜೀವ ಹಾನಿಯಾಗದಂತೆ ನಿಗಾ ವಹಿಸಿ ಮಳೆಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ಮಳೆಯಿಂದ ಜನ-ಜಾನುವಾರುಗಳ ಜೀವಕ್ಕೆ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅನಧಿಕೃತ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಂಗ್ರಹ ಮಾಡದಂತೆ ನಿರಂತರ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅಧಿಕಾರಿಗಳಿಗೆ ಸೂಚನೆ ನೀಡಿದರು.