Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಗಾಲ ಆರಂಭ ವಾಗಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಅವರಿಗೆ ಅವಶ್ಯಕತೆ ಇರುವ ಬಿತ್ತನೆ ಬೀಜ ರಸಗೊಬ್ಬರ ಸರಿಯಾಗಿ ಲಭ್ಯವಾಗುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದರು.
Related Articles
Advertisement
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ ಮಾತನಾಡಿ, ಏಪ್ರಿಲ್ 1ರಿಂದ ಈವರೆಗೆ ಜಿಲ್ಲೆಯಲ್ಲಿ ವಾಡಿಕೆ ಮಳೆ 164 ಮಿ.ಮೀ ಇದ್ದು, 290 ಮಿ.ಮೀ. ಮಳೆಯಾಗಿ ಶೇ. 77ರಷ್ಟು ಹೆಚ್ಚಾಗಿದೆ. 7 ಮಾನವ ಜೀವಹಾನಿಯಾಗಿದ್ದು, ತಲಾ ಕುಟುಂಬಗಳಿಗೆ 5 ಲಕ್ಷ ರೂ. ನಂತೆ 35 ಲಕ್ಷ ರೂ. ಪರಿಹಾರ ವಿತರಿಸಿದೆ. ಮಳೆಯಿಂದಾಗಿ ಜಿಲ್ಲೆಯ 928 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ನಿಯಮಾನುಸಾರ 928 ಮನೆಗಳಿಗೆ 29.69 ಲಕ್ಷ ರೂ. ಪರಿಹಾರ ನೀಡಿದೆ. 49 ಜಾನುವಾರುಗಳ ಜೀವಹಾನಿ ಸಂಭವಿಸಿದ್ದು 3.21 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. 171 ಹೆಕ್ಟೇರ್ ತೋಟಗಾರಿಕೆ ಹಾಗೂ 240 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗುದ್ದು, ಸರ್ವೇ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಕೃಷಿ ಜಂಟಿ ನಿರ್ದೇಶಕ ಜಿಯಾವುಲ್ಲಾ ಮಾತನಾಡಿ, ಜಿಲ್ಲೆಯಲ್ಲಿ ಯೂರಿಯಾ 2024ಟನ್, ಡಿಎಪಿ 359ಟನ್, ಎಂಓಪಿ 185, ಎನ್.ಪಿ.ಕೆ. ಎಸ್ 2709 ಹಾಗೂ ಎಸ್‌ಎಸ್‌ಪಿ 84 ಟನ್ ಸೇರಿ ಒಟ್ಟು 5361 ಟನ್ ಗೊಬ್ಬರ ದಾಸ್ತಾನಿದೆ ಎಂದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಅವರು ರೈತರಿಗಾಗಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಕುರಿತ ಕರಪತ್ರಗಳನ್ನು ಬಿಡುಗಡೆ ಮಾಡಿದರು. ರಾಜ್ಯ ದ್ರಾಕ್ಷಿ ಮಂಡಳಿ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಇತರರಿದ್ದರು.