ಚಾಮರಾಜನಗರ: ಬೇಸಿಗೆ ವೇಳೆ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತಾಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಚಾರುಲತಾ ಸೋಮಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಗರ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆಕಾಡಬಾರದು. ನೀರು ಪೂರೈಕೆಗೆ ಇರುವಮೂಲಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಾರದು. ಮೇವು ಲಭ್ಯತೆಯನ್ನುಗುರುತಿಸಿ ಅಗತ್ಯ ಸಂದರ್ಭದಲ್ಲಿ ಸರಬರಾಜುಮಾಡುವ ಸಂಬಂಧ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಅರಣ್ಯ ಪ್ರದೇಶವು ಹೆಚ್ಚಿದ್ದು ಬೇಸಿಗೆ ವೇಳೆ ಕಾಣಿಸಿಕೊಳ್ಳಬಹುದಾದ ಕಾಡ್ಗಿಚ್ಚುನಿಯಂತ್ರಿಸಲು ಅರಣ್ಯ ಇಲಾಖೆ ಸಜ್ಜಾಗಿರಬೇಕು.ಬೇಸಿಗೆ ಕಾಲದಲ್ಲಿ ಹರಡಬಹುದಾದ ಸಾಂಕ್ರಮಿಕರೋಗಗಳ ತಡೆಗೆ ಕ್ರಮವಹಿಸಬೇಕು. ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು.ನೀರಿನ ಸರಬರಾಜು ಸ್ಥಳಗಳಲ್ಲಿ ಶುದ್ಧೀಕರಣಕಾರ್ಯಕ್ಕೆ ವಿಶೇಷ ಗಮನ ನೀಡಬೇಕು. ನೀರಿನಮಾದರಿಗಳ ಪರೀಕ್ಷೆ ನಡೆಸಿ ವರದಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಮಲೆಮಹದೇಶ್ವರವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಎಸಿ ಡಾ.ಗಿರೀಶ್ ದಿಲೀಪ್ ಬದೋಲೆ, ಡಿವೈಎಸ್‌ಪಿಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರರಾದಚಿದಾನಂದ ಗುರುಸ್ವಾ,ಮಿ, ಆನಂದಪ್ಪ ನಾಯಕ್,ರವಿಶಂಕರ್, ಮಂಜುಳಾ, ನಾಗರಾಜು,ಯಳಂದೂರು ತಾಪಂ ಇಒ ಡಿ.ಆರ್. ಮಹೇಶ್,ಪ್ರೇಮ್‌ಕುಮಾರ್, ಶ್ರೀಕಂಠರಾಜೇಅರಸ್,ಧರಣೇಶ್, ಜಂಟಿ ಕೃಷಿ ನಿರ್ದೇಶಕಿ ಎಚ್.ಟಿ.ಚಂದ್ರಕಲಾ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಸುರೇಶ್, ತೋಟಗಾರಿಕಾಇಲಾಖೆ ಉಪನಿರ್ದೇಶಕ ಶಿವಪ್ರಸಾದ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ನವೀನ್, ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಸೇರಿದಂತೆ ಮತ್ತಿತರರಿದ್ದರು.