ಕೋಲಾರ: ರಾಜ್ಯದ ದಕ್ಷಿಣ ಕಾಶಿಯೆಂದೇ ಪ್ರಸಿದ್ಧಿಯಾಗಿರುವ ಕೋಲಾರ ನಗರ ಹೊರ ವಲಯದಲ್ಲಿರುವ ಅಂತರಗಂಗೆಯ ದರ್ಶನಕ್ಕೆ ಬರುವ ಭಕ್ತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ ಶೆಟ್ಟಿ ಸಾರಥ್ಯದ ಕೋಲಾರ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಸತ್ಯಭಾಮರಿಗೆ ಮನವಿ ಸಲ್ಲಿಸಲಾಯಿತು.
ಕೋಲಾರ ನಗರ ಹೊರ ವಲಯದಲ್ಲಿರುವ ಅಂತರಗಂಗೆಯಲ್ಲಿ ಭಕ್ತರಿಗೆ ಅನುಕೂಲಕ್ಕಿಂತ ಅನಾನುಕೂಲಗಳು ಹೆಚ್ಚಾಗಿವೆ. ದೇವಾಲಯವು ಮುಜರಾಯಿ ಇಲಾಖೆಯ ಸುಪರ್ದಿಯಲ್ಲಿದ್ದು, ಭಕ್ತರಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ದೇವಾಲಯದ ಆವರಣದಲ್ಲಿ ಸ್ವಚ್ಛತೆ ಇಲ್ಲ.ಈದೇವಾಲಯದಲ್ಲಿ ವಾರಕ್ಕೊಮ್ಮೆ ಪೂಜೆ ಸಲ್ಲಿಸುತ್ತಾರೆ. ನಿರ್ವಹಣೆ ಸರಿಯಾಗಿ ಆಗದಿರುವುದರಿಂದ ಭಕ್ತರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೀದಿ ದೀಪದ ವ್ಯವಸ್ಥೆ ಇಲ್ಲ, ಪುಂಡು ಪೋಕರಿಗಳ ಹಾವಳಿ ಹೆಚ್ಚಾಗಿದೆ. ಮಹಿಳಾ ಭಕ್ತರು ಹೋಗಿ ಬರಲು ಭಯ ಮತ್ತು ಆತಂಕಪಡು ವಂತಹ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಪೊಲೀಸ್ ಹೊರ ಠಾಣೆಯಿದ್ದು, ಸೂಕ್ತ ಸಿಬ್ಬಂದಿ ಇಲ್ಲ. ಅಂತರಗಂಗೆ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಜರಾಯಿ ಇಲಾಖೆಯ ತಹಶೀಲ್ದಾರ್ ರವರಿಗೆ ಸೂಚಿಸಿ ಭಕ್ತರಿಗೆ ಅನುಕೂಲ ಮಾಡಿಕೊಡ ಬೇಕೆಂದು ಒತ್ತಾಯಿಸಿದರು.
ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್, ಕೋಲಾರ ತಾಲೂಕು ಅಧ್ಯಕ್ಷ ದಿಂಬ ಡಿ.ಎಂ. ನಾಗರಾಜಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಮತ್ತಿಕುಂಟೆ ಶ್ರೀನಿವಾಸಗೌಡ, ಜಿಲ್ಲಾ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಸಹ ಕಾರ್ಯದರ್ಶಿ ನಟರಾಜ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುದುವತ್ತಿ ರಮೇಶ್, ಮುದುವಾಡಿ ಮುರುಳಿ, ಜಿಲ್ಲಾ ಉಪಾಧ್ಯಕ್ಷ ಕಠಾರಿಪಾಳ್ಯರಮೇಶ್, ಬಾಬು ಹಾಗೂ ಕರವೇ ಪದಾಧಿಕಾರಿಗಳು ಉಪಸ್ಥಿತರಿದ್ದರು.