Advertisement
ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸಾ ಸೌಕರ್ಯಗಳ ಬಗ್ಗೆ ಮತ್ತು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯತತ್ಪರ್ಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Related Articles
Advertisement
ಔಷಧ ವಿತರಣಾ ವಿಭಾಗಕ್ಕೆ ಭೇಟಿ ನೀಡಿದ ಸಿಇಒ, ಆಸ್ಪತ್ರೆಯಲ್ಲಿ ಸರ್ಕಾರದಿಂದ ನೀಡುವ ಉಚಿತ ಔಷಧ ವಿತರಣೆ ವ್ಯವಸ್ಥೆ ಪರಿಶೀಲಿಸಿ ಜನರಿಗೆ ಉತ್ತಮ ಸೇವೆ ನೀಡುವಂತೆ ಸೂಚಿಸಿದರು. ಪ್ರಸಕ್ತ ಸಾಲಿನಲ್ಲಿ ಜಿಪಂ ಕ್ರಿಯಾಯೋಜನೆಯಲ್ಲಿ ಆಯುಷ್ ಕಚೇರಿ ಕಟ್ಟಡಕ್ಕಾಗಿನ ಸ್ಥಳ ಪರಿಶೀಲನೆ ನಡೆಸಿದ ಅವರು, ಆಯುಷ್ ಆಸ್ಪತ್ರೆಯಲ್ಲಿ ವಾಹನಗಳ ನಿಲುಗಡೆ ಸ್ಥಳ, ರೋಗಿಗಳಿಗೆ ಕುಳಿತುಕೊಳ್ಳಲು ಸಿಮೆಂಟ್ ಕುರ್ಚಿ ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಿದರು.
ನಂತರ ಜಿಲ್ಲಾ ಆಯುಷ್ ಅಧಿಕಾರಿ ಡಾ| ಅನುರಾಧಾ ಚಂಚಲಕರ, ವೈದ್ಯಾಧಿಕಾರಿ ಡಾ| ದಯಾನಂದ ಮಾಳಾಬಗಿ, ಡಾ| ಶಶಿಕಾಂತ ಹೊಸಮನಿ, ಡಾ| ಸಂಜಯ ಜೀರ, ಡಾ| ಲೋಕನಾಥ ಅವಧಾನಿ, ಡಾ| ಆಸೀಫ್ ತಾಳಿಕೋಟಿ ಅವರ ಸಭೆ ನಡೆಸಿ, ಸರ್ಕಾರ ಬಡ ರೋಗಿಗಳ ಅನುಕೂಲಕ್ಕಾಗಿ ಆಯುಷ್ ಆಸ್ಪತ್ರೆಗೆ ಹತ್ತು ಹಲವು ಸೌಲಭ್ಯ ನೀಡುತ್ತಿದೆ. ಹೀಗಾಗಿ ಸರ್ಕಾರದ ಆಯುಷ್ ಆರೋಗ್ಯದ ಸೇವೆಯನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.