Advertisement

ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಿ

03:57 PM Sep 11, 2022 | Team Udayavani |

ವಿಜಯಪುರ: ಜಿಲ್ಲಾ ಪಂಚಾಯತ್‌ ಸಿಇಒ ರಾಹುಲ್‌ ಶಿಂಧೆ ಅವರು ಸರ್ಕಾರಿ ಜಿಲ್ಲಾ ಆಯುಷ್‌ ಕಚೇರಿ, ಆಯುಷ್‌ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಆಯುರ್ವೇದ ವೈದ್ಯಕೀಯ ಸೇವೆ ಪಡೆಯಲು ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳಿಗೆ ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಆರೋಗ್ಯ ಸೇವೆ ನೀಡುವಂತೆ ಆಯುಷ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸಾ ಸೌಕರ್ಯಗಳ ಬಗ್ಗೆ ಮತ್ತು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯತತ್ಪರ್ಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಆಸ್ಪತ್ರೆಯ ಒಳ ರೋಗಿಯ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಇಒ, ಆಯುಷ್‌ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆ ಮತ್ತು ಸೌಕರ್ಯಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದರು.

ಆಸ್ಪತ್ರೆಯ ಹೊರ ರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ದಿನನಿತ್ಯ ಬರುವ ರೋಗಿಗಳ ಸಂಖ್ಯೆ, ಸದರಿ ಆಸ್ಪತ್ರೆಯಲ್ಲಿ ನೀಡುವ ಚಿಕಿತ್ಸೆ, ಔಷಧ ಕುರಿತು ಮಾಹಿತಿ ಪಡೆದು ಪರಿಶೀಲಿಸಿದರು.

ಇದೆ ವೇಳೆ ಆಸ್ಪತ್ರೆಯ ಪ್ರಯೋಗಾಲಯ, ಪಂಚಕರ್ಮ ವಿಭಾಗಕ್ಕೆ ಸಹ ಭೇಟಿ ನೀಡಿ ಪರಿಶೀಲಿಸಿ ಸದರಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳ ಸಂಖ್ಯೆ, ಚಿಕಿತ್ಸಾ ವಿಧಾನದ ಕುರಿತು ಮಾಹಿತಿ ಪಡೆದರು.

Advertisement

ಔಷಧ ವಿತರಣಾ ವಿಭಾಗಕ್ಕೆ ಭೇಟಿ ನೀಡಿದ ಸಿಇಒ, ಆಸ್ಪತ್ರೆಯಲ್ಲಿ ಸರ್ಕಾರದಿಂದ ನೀಡುವ ಉಚಿತ ಔಷಧ ವಿತರಣೆ ವ್ಯವಸ್ಥೆ ಪರಿಶೀಲಿಸಿ ಜನರಿಗೆ ಉತ್ತಮ ಸೇವೆ ನೀಡುವಂತೆ ಸೂಚಿಸಿದರು. ಪ್ರಸಕ್ತ ಸಾಲಿನಲ್ಲಿ ಜಿಪಂ ಕ್ರಿಯಾಯೋಜನೆಯಲ್ಲಿ ಆಯುಷ್‌ ಕಚೇರಿ ಕಟ್ಟಡಕ್ಕಾಗಿನ ಸ್ಥಳ ಪರಿಶೀಲನೆ ನಡೆಸಿದ ಅವರು, ಆಯುಷ್‌ ಆಸ್ಪತ್ರೆಯಲ್ಲಿ ವಾಹನಗಳ ನಿಲುಗಡೆ ಸ್ಥಳ, ರೋಗಿಗಳಿಗೆ ಕುಳಿತುಕೊಳ್ಳಲು ಸಿಮೆಂಟ್‌ ಕುರ್ಚಿ ಸೌಲಭ್ಯ ಕಲ್ಪಿಸುವ ಕುರಿತು ಚರ್ಚಿಸಿದರು.

ನಂತರ ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಅನುರಾಧಾ ಚಂಚಲಕರ, ವೈದ್ಯಾಧಿಕಾರಿ ಡಾ| ದಯಾನಂದ ಮಾಳಾಬಗಿ, ಡಾ| ಶಶಿಕಾಂತ ಹೊಸಮನಿ, ಡಾ| ಸಂಜಯ ಜೀರ, ಡಾ| ಲೋಕನಾಥ ಅವಧಾನಿ, ಡಾ| ಆಸೀಫ್‌ ತಾಳಿಕೋಟಿ ಅವರ ಸಭೆ ನಡೆಸಿ, ಸರ್ಕಾರ ಬಡ ರೋಗಿಗಳ ಅನುಕೂಲಕ್ಕಾಗಿ ಆಯುಷ್‌ ಆಸ್ಪತ್ರೆಗೆ ಹತ್ತು ಹಲವು ಸೌಲಭ್ಯ ನೀಡುತ್ತಿದೆ. ಹೀಗಾಗಿ ಸರ್ಕಾರದ ಆಯುಷ್‌ ಆರೋಗ್ಯದ ಸೇವೆಯನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next