Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಸತಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಮಟ್ಟದಲ್ಲಿ ಅನೇಕರು ವಸತಿ ರಹಿತರಿದ್ದಾರೆ. ಅಂತಹವರನ್ನು ಗುರುತಿಸಿ ಅರ್ಹ ಫಲಾನುಭವಿಗೆ ವಸತಿ ಯೋಜನೆಗಳ ಸೌಲಭ್ಯ ತಲುಪಿಸಿ. ಫಲಾನುಭವಿಗಳ ಆಯ್ಕೆ ವೇಳೆ ಯಾವುದೇ ಜನಪ್ರತಿನಿಧಿಗಳ ಅಥವಾ ಪ್ರಭಾವಿಗಳ ಒತ್ತಡಕ್ಕೆ ಒಳಗಾಗದೇ ಸರ್ಕಾರದ ಸೌಲಭ್ಯವನ್ನು ಅರ್ಹರಿಗೆ ತಲುಪಿಸಿ. ತಾಲೂಕು ಮಟ್ಟದ ಅಧಿ ಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ಅಧಿಧೀನ ಅಧಿಕಾರಿಗಳಿಂದ ಗ್ರಾಮಗಳಲ್ಲಿ ಸಮೀಕ್ಷೆ ನಡೆಸಿ ವಾಸ್ತವಾಂಶ ಸಂಗ್ರಹಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಾಸ್ತವ ದತ್ತಾಂಶಗಳ ವರದಿ ಸಲ್ಲಿಸಿ. ಯಾವುದೇ ಬೇಜವಾಬ್ದಾರಿ ವರ್ತನೆ, ಅಕ್ರಮ ನಡೆದರೆ ಸಹಿಸುವುದಿಲ್ಲ. ಅಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿ ಕುರಿತು ಮಾಹಿತಿ ದೊರೆತರೆ ತಕ್ಷಣವೇ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಆದ್ದರಿಂದ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಕಾರ್ಯ ನಿರ್ವಹಿಸಿ ಎಂದರು.
Related Articles
Advertisement
ಸಭೆಯಲ್ಲಿ ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ದಢೇಸುಗೂರು, ವಸತಿ ಇಲಾಖೆ ವ್ಯವಸ್ಥಾಪಕ ಮಹದೇವ ಪ್ರಸಾದ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಡಿಸಿ ಎಂ.ಪಿ. ಮಾರುತಿ, ಎಸಿ ಸಿ.ಡಿ. ಗೀತಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ದರಾಮೇಶ್ವರ, ನಗರಸಭೆ ಪೌರಾಯುಕ್ತ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.