Advertisement
ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ಅಲ್ಲಿಯ ಪರಿಸ್ಥಿತಿ ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
Related Articles
Advertisement
ಜಿಲ್ಲಾ ಉಸ್ತುವಾರಿ ಸಚಿವರುಗಳು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಚುನಾವಣಾ ಪ್ರಚಾರಕ್ಕೆ ಹೋದರೆ ಹೊರತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿಲ್ಲ. ಕಂದಾಯ ಸಚಿವರು ಕಾಟಾಚಾರಕ್ಕೆ ಹೋಗಿ ಭೇಟಿ ಕೊಟ್ಟಂತೆ ಮಾಡಿದರು. ಅವರ ವರ್ತನೆಯ ಕುರಿತು ಜನ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೇಲಿಂದ ಮೇಲೆ ಬಂದೊದಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಜನ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ. ಇದು ಜನರಿಂದ ಆಯ್ಕೆಯಾದ ಸರ್ಕಾರದ ಕ್ರೂರ, ದುಷ್ಟ ಸರ್ಕಾರ ಎನ್ನದೆ ಬೇರೆ ದಾರಿಗಳೇ ಇಲ್ಲ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.
ಸರ್ಕಾರ ಜನರನ್ನು ಶತ್ರುಗಳು ಎಂದು ನೋಡದೆ ಅವರ ಸಂಕಷ್ಟಕ್ಕೆ ಸ್ಪಂದಿಸಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಸಂಕಷ್ಟದಲ್ಲಿರುವ ಜನರಿಗೆ ಈ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ನಿಮಗೆ ಆ ಧೈರ್ಯವಿರದಿದ್ದರೆ ವಿರೋಧ ಪಕ್ಷದ ಮುಖಂಡರನ್ನು ಒಳಗೊಂಡ ನಿಯೋಗವನ್ನು ಕರೆದುಕೊಂಡು ಹೋಗಿ, ನಾವು ಕೇಳುತ್ತೇವೆ. ನಾವು ನಿಂತು ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.