Advertisement
ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಸೋಮವಾರ ಕಾಂಗ್ರೆಸ್ ಮುಖಂಡರು ಹಾಗೂ ವಿದ್ಯಾರ್ಥಿಗಳ ಪೋಷಕರೊಂದಿಗೆ ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಿದ ಅವರು, ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರ ಗಳನ್ನು ತೆರೆಯಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಒಂದು ರೀತಿಯಭಯದ ವಾತಾವರಣವಿದೆ ಎಂದರು.
Related Articles
Advertisement
85 ಪರೀಕ್ಷಾ ಕೇಂದ್ರ: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತಾಧಿಕಾರಿ ರಂಗದಾಸಪ್ಪ ಮಾತನಾಡಿ, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ 23783 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯ 13534 ಸೇರಿ 37317 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ. ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ 85 ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 59 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
3 ವಿಶೇಷ ಕೊಠಡಿ: ಜೂ.18 ರಂದು ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ತಕ್ಷಣ ಮುಖ್ಯ ಮೇಲ್ವಿಚಾರಕರನ್ನು ಪರೀಕ್ಷಾ ಕೇಂದ್ರ ಗಳಿಗೆ ಕಳುಹಿಸಿ ಸಿದತೆ ಬಗ್ಗೆ ಪರಿಶೀಲನೆ ನಡೆ ಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರಗಳಲ್ಲಿ ಸಿ.ಸಿ. ಕ್ಯಾಮೆರಾ ಅಳ ವಡಿಸಲಾಗುವುದು. ಈಗಿರುವ ಪರೀಕ್ಷಾ ಕೇಂದ್ರ ಗಳಲ್ಲಿ ಯಾವುದೇ ಕಂಟೈನ್ಮೆಂಟ್ ಝೋನ್ ಇಲ್ಲ, ಅಗತ್ಯವಿದ್ದರೆ 3 ವಿಶೇಷ ಕೊಠಡಿಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದರು.
ಸಿದ್ಧಗಂಗಾ ಮಠದಲ್ಲಿ 1200 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡಿ, ಮಾಸ್ಕ್ ವಿತರಿಸಿ ಸ್ಯಾನಿಟೈಸರ್ ಹಾಕಿ ಪರೀಕ್ಷಾ ಕೇಂದ್ರ ಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು. ಜಿಪಂ ಸದಸ್ಯ ಕೆಂಚಮಾರಯ್ಯ, ಮುಖಂಡರಾದ ರೇವಣಸಿದಯ್ಯ, ಜಿ.ಎಸ್. ಸೋಮಣ್ಣ ಇತರರು ಇದ್ದರು.