Advertisement

ದೌರ್ಜನ್ಯಕೆ ಒಳಗಾದವರಿಗೆ ಪರಿಹಾರ ಒದಗಿಸಿ

03:03 PM Sep 20, 2019 | Suhan S |

ದೇವನಹಳ್ಳಿ: ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ ದೌರ್ಜನ್ಯ ಪ್ರತಿಬಂಧ ಕಾನೂನುಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌. ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ಚಪ್ಪರಕಲ್ಲು ಸರ್ಕಲ್‌ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 2 ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೇಲಿನ ದೌರ್ಜನ್ಯ ಪ್ರತಿಬಂದ ನಿಯಮಗಳ 1995 ರ ನಿಯಮ 17 ರ ಅನ್ವಯ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ಸಂಬಂಧಿಸಿದ ಪರಿಹಾರ ಪ್ರಕ್ರಿಯೇ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರಿಗೆ ಕಾನೂನಿನ ನಿಯಮಾನುಸಾರ ಸಹಾಯಧನ ನೀಡುವುದು, ಅನುಕಂಪದ ಆಧಾರದ ಮೇರೆಗೆ ಸರ್ಕಾರಿ ಉದ್ಯೋಗ ನೀಡುವುದು, ಬಿಪಿಎಲ್‌ ಪಡಿತರ ಚೀಟಿ, ಆಯುಷ್ಮಾನ್‌ ಕಾರ್ಡ್‌, ಮಕ್ಕಳ ವಿದ್ಯಾ  ಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡುವುದು ಹಾಗೂ ಸರ್ಕಾರಿ ಜಮೀನು ಅವಲಂಬಿತ ಬುಡಕಟ್ಟು ರೈತ ವರ್ಗಕ್ಕೆ ಉಚಿತ ನಿವೇಶನ ನೀಡುವಂತಹ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಸಂಪೂರ್ಣ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ ಎಂದರು.

ಸಕಾಲದ ಮೂಲಕ ದಾಖಲಾಗುವ ದೌರ್ಜನ್ಯ ಪ್ರಕರಣಗಳನ್ನು 7 ದಿನಗಳ ಒಳಗಾಗಿ ಪರಿಶೀಲಿಸಿ, ಪರಿಹಾರ ನೀಡಲಾಗುವುದೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ ಅವರು ಸಭೆಯಲ್ಲಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಜಗದೀಶ್‌. ಕೆ.ನಾಯಕ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸುಜಿತ್‌.ವಿ.ಜೆ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರೀತಿ, ತಾಲೂಕುಗಳ ತಹಶೀಲ್ದಾರ್‌ಗಳು, ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕರುಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next