Advertisement

ಕಾಲಮಿತಿಯಲ್ಲಿ ಸೇವೆ ಒದಗಿಸಿ

03:46 PM Jan 30, 2021 | Team Udayavani |

ಗದಗ: ಸಕಾಲ ಯೋಜನೆಯಡಿ ಇಲಾಖೆಗಳಿಗೆ ನಿಗದಿಪಡಿಸಿದ ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿಗಳನ್ನು ಸ್ವೀಕರಿಸಬೇಕು. ವಿನಾಃಕಾರಣ ಸ್ವೀಕರಿಸಿದ ಅರ್ಜಿಗಳನ್ನು ತಿರಸ್ಕರಿಸದೇ, ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಕಾಲ ಯೋಜನೆಯ ಜಿಲ್ಲಾಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಸ್ವೀಕರಿಸಿದ ಅರ್ಜಿಗಳನ್ನು ವಿಳಂಬ ಮಾಡದೇ ನಿಗದಿತ ಅವಧಿಯೊಳಗೆ ಅರ್ಜಿ ನೀಡಿದವರಿಗೆ ಸೌಲಭ್ಯ ಒದಗಿಸಬೇಕು. ಇದರಿಂದ ಜಿಲ್ಲೆಗೆ ಉತ್ತಮ ರ್‍ಯಾಂಕಿಂಗ್‌ ಗಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಸಕಾಲ ಯೋಜನೆಯನ್ನು ಪ್ರತಿದಿನ, ಪ್ರತಿ ವಾರ, ಪ್ರತಿ ಮಾಹೆವಾರು ರಾಜ್ಯಾದ್ಯಂತ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳು ಈ ಕುರಿತು ಹೆಚ್ಚು ನಿಗಾ ವಹಿಸಬೇಕು. ಸಕಾಲ ಯೋಜನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕು. ಅರ್ಜಿಗಳ ವಿಲೇವಾರಿ ಬಗ್ಗೆ ಅಲಕ್ಷÂ ವಹಿಸಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಯಾಗುವರು ಎಂದು ಎಚ್ಚರಿಸಿದರು.

ಸಕಾಲ ಯೋಜನೆಯಡಿ ಈವರೆಗೆ 36,229 ಅರ್ಜಿಗಳು ಸ್ವೀಕೃತವಾಗಿದ್ದು, 1,606 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 589 ಅರ್ಜಿಗಳು ನಿಗದಿಪಡಿಸಿದ ದಿನಾಂಕಕ್ಕಿಂತ ವಿಳಂಬವಾಗಿ ವಿಲೇವಾರಿ ಮಾಡಲಾಗಿದೆ ಎಂದು ಸಕಾಲ ಕಾರ್ಯಕ್ರಮದ ನೋಡಲ್‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದನ್ನೂ ಓದಿ:ಅಗ್ನಿಶಾಮಕ ಠಾಣೆಯಿಂದ ಅಣಕು ಪ್ರದರ್ಶನ

Advertisement

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್‌. ರುದ್ರೇಶಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್‌ ಎ., ಆಯುಷ್‌ ಅಧಿಕಾರಿ ಡಾ| ಸುಜಾತಾ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ ಬಸರಿಗಿಡದ, ನಗರಸಭೆ ಪೌರಾಯುಕ್ತ ರಮೇಶ ಜಾಧವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next