Advertisement

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ

05:59 PM Aug 16, 2020 | Suhan S |

ರಾಯಚೂರು: ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಮನವಿ ಸಲ್ಲಿಸಿದರು.

Advertisement

ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲವರು 20-25 ವರ್ಷಗಳಿಂದ ಸೇವೆಯಲ್ಲಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ತಮ್ಮ ಕೈಯಿಂದಲೇ ಖರ್ಚು ಭರಿಸಿ ಆನ್‌ ಲೈನ್‌ ತರಗತಿಗಳನ್ನೂ ನಡೆಸಿದ್ದಾರೆ. 2019ರ ಜನವರಿಯಲ್ಲಿ ಯುಜಿಸಿ ಸುತ್ತೋಲೆಯು ಅತಿಥಿ ಉಪನ್ಯಾಸಕರ ಪ್ರತಿ ಬೋಧನಾ ಅವಧಿಗೆ 1,500 ಅಥವಾ ಮಾಸಿಕ 50 ಸಾವಿರ ರೂ. ವೇತನವನ್ನು ನಿಗದಿ ಮಾಡುವಂತೆ ನಿರ್ದೇಶನ ನೀಡಿತ್ತು. ಆದರೆ, ಇಂದಿಗೂ ನಮ್ಮ ರಾಜ್ಯದಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ನೆಟ್‌, ಸೆಟ್‌ ಅಥವಾ ಪಿ.ಎಚ್‌ಡಿ ಆಗಿರುವವರಿಗೆ ಮಾಸಿಕ ಕೇವಲ 13 ಸಾವಿರ, ಉಳಿದವರಿಗೆ 11 ಸಾವಿರ ರೂ. ವೇತನ ನೀಡಲಾಗುತ್ತದೆ ಎಂದು ದೂರಿದರು.

ಅತಿಥಿ ಉಪನ್ಯಾಸಕರ ಬಾಕಿ ವೇತನ ಬಿಡುಗಡೆ ಮಾಡಬೇಕು. ರಜಾ ಅವಧಿಯನ್ನು ಕೆಲಸದ ಅವಧಿಯೆಂದು ಪರಿಗಣಿಸಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಚನ್ನಬಸವ ಜಾನೇಕಲ್‌, ಅತಿಥಿ ಉಪನ್ಯಾಸಕರಾದ ಮುಕ್ಕಣ್ಣ, ಡಾ| ಹನುಮಂತ ಕುರ್ಡಿ, ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಮಲ್ಲನಗೌಡ ಸೇರಿದಂತೆ ಅನೇಕರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next