Advertisement

ಅಂಗವಿಕಲರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಆಯುಕ್ತರ ಸೂಚನೆ

03:36 AM Apr 05, 2019 | sudhir |

ಮಡಿಕೇರಿ: ಲೋಕಸಭಾ ಚುನಾವಣೆಯ ಮತದಾನದಂದು ವಿಶೇಷ ಚೇತನರನ್ನು ಮತಗಟ್ಟೆ ಕೇಂದ್ರಗಳಿಗೆ ಕರೆದುಕೊಂಡು ಹೋಗಿ ಬರಲು ಸಾರಿಗೆ ವ್ಯವಸ್ಥೆ, ವೀಲ್‌ಚೇರ್‌ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಟಿ.ಕೆ.ಅನಿಲ್‌ ಕುಮಾರ್‌ ಅವರು ಸೂಚಿಸಿದ್ದಾರೆ.

Advertisement

ಲೋಕಸಭಾ ಚುನಾವಣೆ ಹಿನ್ನೆಲೆ ವಿಶೇಷ ಚೇತನರಿಗೆ ಮತದಾನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಲು ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಮಾಹಿತಿ ಪಡೆದು ಅವರು ಮಾತನಾಡಿದರು.

ಜಿಲ್ಲೆಯ ಮತಗಟ್ಟೆ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್‌ ಸಂಪರ್ಕ ಇತರ ಮೂಲ ಸೌಲಭ್ಯಗಳಿವೆ. ಇದರ ಜೊತೆಗೆ ಸರಿಯಾದ ರಸ್ತೆ ಮಾರ್ಗ ಇರಬೇಕು ಎಂದು ಅವರು ಹೇಳಿದರು. ಮತದಾನದಂದು ಮತಗಟ್ಟೆಗೆ ಕರೆದುಕೊಂಡು ಬರಲು ಮತ್ತು ಹೋಗಲು ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಮತಗಟ್ಟೆಗಳಲ್ಲಿ ಕಡ್ಡಾಯವಾಗಿ ರ್‍ಯಾಂಪ್‌ ಇರಬೇಕು ಎಂದು ಅನಿಲ್‌ ಕುಮಾರ್‌ ಅವರು ನಿರ್ದೇಶ‌ ನೀಡಿದರು. ಜಿ.ಪಂ.ಸಿಇಒ ಹಾಗೂ ಸ್ವೀಪ್‌ ಸಮಿತಿ ಅಧ್ಯಕ್ಷೆ ಕೆ.ಲಕ್ಷಿ¾ಪ್ರಿಯಾ ಅವರು ಜಿಲ್ಲೆಯಲ್ಲಿ 3,090 ವಿಶೇಷ ಚೇತನರಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,696 ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,394 ವಿಶೇಷ ಚೇತನರು ಇದ್ದಾರೆ. ಇವರಲ್ಲಿ 1,978 ಪುರುಷರು ಮತ್ತು 1,112 ಮಹಿಳಾ ವಿಶೇಷ ಚೇತನರು ಇದ್ದಾರೆ ಎಂದು ಅವರು ಮಾಹಿತಿ ನೀಡಿದರು. 543 ಮತಗಟ್ಟೆಗಳಲ್ಲಿ ರ್‍ಯಾಂಪು ವ್ಯವಸ್ಥೆ ಮಾಡಲಾಗಿದೆ. 357 ವೀಲ್‌ ಚೇರ್‌, 463 ಕಡೆ ಭೂತ ಕನ್ನಡಿ, 380 ಮತಗಟ್ಟೆಗಳಲ್ಲಿ ಬ್ರೆçಲ್‌ ಲಿಫಿ ಹಾಗೂ ಬ್ರೆçಲ್‌ ಮತ ಚೀಟಿ, ಹಾಗೆಯೇ 146 ಜೀಪು ಮತ್ತು ಆಟೋ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹಾಗೂ 670 ಮಂದಿ ವಾಲೆಂಟರೀಸ್‌ ಅವರನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಜಿ.ಪಂ.ಉಪ ಕಾರ್ಯದರ್ಶಿ ಹಾಗೂ ಮತಗಟ್ಟೆ ಕೇಂದ್ರಗಳ ನೋಡಲ್‌ ಅಧಿಕಾರಿ ಗುಡೂರು ಭೀಮಸೇನ, ಉಪಸ್ಥಿತರಿದ್ದರು.

ಸೂಕ್ತ ವ್ಯವಸ್ಥೆ
ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಮತಗಟ್ಟೆ ಕೇಂದ್ರಗಳಲ್ಲಿ ಕುಡಿ ಯುವ ನೀರು, ವಿದ್ಯುತ್‌ ಸಂಪರ್ಕ, ರ್‍ಯಾಂಪ್‌ ವ್ಯವಸ್ಥೆ ಮತ್ತಿತರ ಸೌಲಭ್ಯಗಳ ಜತೆಗೆ ಮುಖ್ಯ ರಸ್ತೆಯಿಂದ ಮತಗಟ್ಟೆ ಕೇಂದ್ರಗಳಿಗೆ ತೆರಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಅಧಿಕಾರಿ ದೇವರಾಜು ಅವರುಅಂಗವಿಕಲರು ಮತದಾನ ದಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಲು ಅಗತ್ಯ ಸಿದ್ಧತೆ ಗಳನ್ನು ಮಾಡಿಕೊಳ್ಳ ಲಾಗಿದೆ ಎಂದು ಮಾಹಿತಿ ನೀಡಿದರು. ಮತದಾನದ ಮಹತ್ವ ಕುರಿತು ಸಂದೇಶ ಸಾರಲು ಅಂಗವಿಕಲರನ್ನು ರಾಯಭಾರಿಗಳ ನ್ನಾಗಿ ನೇಮಕ ಮಾಡಲಾಗಿದೆ ಎಂದುತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next