Advertisement
ಕೂಲಿ ಕಾರ್ಮಿಕ ಸಾವುಕಟಪಾಡಿ ಕೆನರಾ ಬ್ಯಾಂಕ್ ಬಳಿ ಬುಧವಾರ ರಾತ್ರಿ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕ ಜಗದೀಶ್ (30) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಳಿ ರಸ್ತೆ ಬದಿಯ ಕಲ್ಲು ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಹೋಮ್ ನರ್ಸ್ ಬಾರ್ಕೂರು ನಿವಾಸಿ ರತ್ನಾ (42) ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.
Related Articles
Advertisement
ತಲೆಗೆ ಗಂಭೀರ ಏಟಾಗಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಪರೀಕ್ಷಿಸಿದ ವೈದ್ಯರು ರತ್ನಾ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದರು.ಕೂಲಿ ಕಾರ್ಮಿಕನ ಸಾವಿಗೆ ಕಾರಣ ನಾದ ಕಾರು ಚಾಲಕ ಪ್ರದೀಪ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.