Advertisement

K.S. Eshwarappa: ಪ್ರಚೋದನಕಾರಿ ಭಾಷಣ; ಕೆ.ಎಸ್.ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು

08:33 AM Oct 13, 2023 | Team Udayavani |

 

Advertisement

ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಆರೋಪ‌ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯ ಹಿನ್ನಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಕಾರ್ಯಕ್ರಮದಲ್ಲಿ ಹಲವು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಈ ರೀತಿಯ ಹೇಳಿಕೆ ಸುಮೋಟೋ ಪ್ರಕರಣ ದಾಖಲಾತಿಗೆ ಕಾರಣವಾಗಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಐಪಿಸಿ ಸೆಕ್ಷನ್ 153ಎ ಮತ್ತು 504 ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next