ಪೃಥ್ವಿ ಅಂಬರ್ ನಾಯಕರಾಗಿ ನಟಿಸುತ್ತಿರುವ “ಚೌಕಿದಾರ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ನಿನ್ನೆ ಚಿತ್ರಕ್ಕೆ ಕುಂಬಳಕಾಯಿ ಹೊಡೆಲಾಯಿತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.
ಈ ವೇಳೆ ಮಾತನಾಡಿದ ಪೃಥ್ವಿ, ಈ ಚಿತ್ರದಿಂದ ಬಹಳಷ್ಟು ಕಲಿಯಲು ಸಿಕ್ಕಿದೆ. ನುರಿತ ನಿರ್ದೇಶಕರು ಇದ್ದಾಗ ಹೇಗೆ ಬೇಕು ಯಾವ ರೀತಿ ಬೇಕು ಅನ್ನೋದನ್ನು ಅವರು ಹೇಳಿಕೊಟ್ಟಿದ್ದಾರೆ. ಮನುಷ್ಯನ ಭಾವನೆಗಳನ್ನು ತುಂಬಾ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಫ್ಯಾಮಿಲಿ ಎಮೋಷನ್ ತುಂಬಾ ಚೆನ್ನಾಗಿ ಅಳವಡಿಸಿದ್ದಾರೆ. ಸಾಯಿ ಕುಮಾರ್ ಅವರು ಸೆಟ್‌ನಲ್ಲಿ ಇದ್ದ ರೀತಿ. ನಮ್ಮಂತಹ ಕಲಾವಿದರಿಗೆ ಪುಸ್ತಕ ಇದ್ದಂತೆ’ ಎಂದರು.
ಚಂದ್ರಶೇಖರ್ ಬಂಡಿಯಪ್ಪ ಈ ಚಿತ್ರದ ನಿರ್ದೇಶಕರು. ಇಡೀ ಕಲಾವಿದರು ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ. ಮೇ ತಿಂಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲ್ರಾನ್ ಮಾಡುತ್ತಿದ್ದೇವೆ. ಸಂಕ್ರಾಂತಿಗೆ ಟೀಸರ್ ರಿಲೀಸ್ ಮಾಡುತ್ತೇವೆ. ನಾಲ್ಕು ಹಾಡುಗಳಿವೆ. ಪ್ರತಿಯೊಬ್ಬ ಮನೆಯಲ್ಲಿಯೂ ಚೌಕಿದಾರ್ ಇರುತ್ತಾರೆ ಅವರ ಕಥೆಯನ್ನು ಮಗನಾಗಿ ನಟಿಸಿ¨ªಾರೆ ಎಂದರು.
ಧನ್ಯಾ ರಾಮ್ ಕುಮಾರ್ ಈ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಪಾತ್ರ ಸಿಕ್ಕಿರುವುದು ಖುಷಿ ಜೊತೆಗೆ ಹೆಮ್ಮೆ ಇದೆ. ಈ ಸಿನಿಮಾದಿಂದ ನನಗೆ ಕಲಿಯುವುದು ತುಂಬಾನೇ ಸಿಕ್ತು ಎನ್ನುವುದು ಅವರ ಮಾತು.
ಹಿರಿಯ ನಟ ಸಾಯಿಕುಮಾರ್ ಮಾತನಾಡಿ, ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ಇದೇ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಕುಂಬಳಕಾಯಿ ಕೂಡ ಇಲ್ಲೇ ಹೊಡೆಯಲಾಗಿದೆ. ಯಾವ ಸಿನಿಮಾಗೂ ಇದು ಆಗಿಲ್ಲ. ಮಹಾನ್ ಕಾಳಿ ಆಶೀರ್ವಾದ ನಮ್ಮ ಚಿತ್ರಕ್ಕಿದೆ ಅನ್ನುವುದು ಗೊತ್ತಾಗುತ್ತಿದೆ. ಚೌಕಿದಾರ್ ಸಿನಿಮಾದಲ್ಲಿ ಒಂದೊಳ್ಳೆ ಕಲಾವಿದರು ಹಾಗೂ ತಂತ್ರಜ್ಞಾನದ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ಇದೊಂದು ಫ್ಯಾಮಿಲಿ ಡ್ರಾಮಾ, ಎಮೋಷನಲ್ ಡ್ರಾಮಾ ಎಂದರು.
“ಚೌಕಿದಾರ್’ ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ.