Advertisement
ಈ ವಿಚಾರವಾಗಿ ಎಲ್.ಎನ್. ಪವಿತ್ರಾ ಸೇರಿ 28 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು.
ಸರಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮತ್ತು ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್. ರವಿಶಂಕರ್, ಮರು ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿ ಸದಂತೆ ಸರಕಾರವನ್ನು ನಿರ್ಬಂಧಿಸಿ ಮಧ್ಯಾಂತರ ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡರು. ಅದಕ್ಕೆ ಸರಕಾರದ ಪರ ವಕೀಲರು, ಮರು ಪರೀಕ್ಷೆ ನಡೆಸಲು ಇನ್ನೂ ಸಾಕಷ್ಟು ಕಾಲಾವಕಾಶ ಬೇಕಿದೆ. ಆದ್ದರಿಂದ, ಸದ್ಯಕ್ಕೆ ಮಧ್ಯಾಂತರ ಆದೇಶದ ಅಗತ್ಯವಿಲ್ಲ ಎಂದು ತಿಳಿಸಿದರು.
Related Articles
Advertisement
ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಪಿಎಸ್‌ಐ ನೇಮಕಾತಿಗೆ ನಡೆಸ ಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಎಪ್ರಿಲ್ 29ರಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಕಾರ್ಯದರ್ಶಿಗೆ ನಿರ್ದೇಶಿಸಿ
ಅಂತಿಮ ಪಟ್ಟಿಯು ಈ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ನಿರ್ಧಾ ರಕ್ಕೆ ಒಳಪಟ್ಟಿರುವಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕು ಎಂದು ಮಧ್ಯಾಂತರ ಮನವಿ ಮಾಡಿದ್ದಾರೆ.