Advertisement

ಪಿಎಸ್‌ಐ ನೇಮಕಾತಿ ಅಕ್ರಮ: ವಿಚಾರಣೆ ಮುಂದಕ್ಕೆ

10:52 AM May 19, 2022 | Team Udayavani |

ಬೆಂಗಳೂರು: ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಹೊರಡಿಸಿರುವ ಆದೇಶ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ ಮೇ 24ರ ವರೆಗೆ ಕಾಲಾವಕಾಶ ನೀಡಿದೆ.

Advertisement

ಈ ವಿಚಾರವಾಗಿ ಎಲ್‌.ಎನ್‌. ಪವಿತ್ರಾ ಸೇರಿ 28 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು.

ಸರಕಾರಕ್ಕೆ ಕಾಲಾವಕಾಶ
ಸರಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮತ್ತು ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್‌. ರವಿಶಂಕರ್‌, ಮರು ಪರೀಕ್ಷೆ ನಡೆಸಲು ಅಧಿಸೂಚನೆ ಹೊರಡಿ ಸದಂತೆ ಸರಕಾರವನ್ನು ನಿರ್ಬಂಧಿಸಿ ಮಧ್ಯಾಂತರ ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡರು. ಅದಕ್ಕೆ ಸರಕಾರದ ಪರ ವಕೀಲರು, ಮರು ಪರೀಕ್ಷೆ ನಡೆಸಲು ಇನ್ನೂ ಸಾಕಷ್ಟು ಕಾಲಾವಕಾಶ ಬೇಕಿದೆ. ಆದ್ದರಿಂದ, ಸದ್ಯಕ್ಕೆ ಮಧ್ಯಾಂತರ ಆದೇಶದ ಅಗತ್ಯವಿಲ್ಲ ಎಂದು ತಿಳಿಸಿದರು.

ಅದನ್ನು ಪರಿಗಣಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಿತು.

Advertisement

ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ
ಪಿಎಸ್‌ಐ ನೇಮಕಾತಿಗೆ ನಡೆಸ ಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಎಪ್ರಿಲ್‌ 29ರಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಕಾರ್ಯದರ್ಶಿಗೆ ನಿರ್ದೇಶಿಸಿ
ಅಂತಿಮ ಪಟ್ಟಿಯು ಈ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ನಿರ್ಧಾ ರಕ್ಕೆ ಒಳಪಟ್ಟಿರುವಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಒಳಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕು ಎಂದು ಮಧ್ಯಾಂತರ ಮನವಿ ಮಾಡಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next