Advertisement

ಪಿಎಸ್ಐ ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸೇರಿ 26 ಆರೋಪಿಗಳಿಗೆ ಜಾಮೀನು

12:46 PM Jan 05, 2023 | Team Udayavani |

ಕಲಬುರಗಿ: ಪಿಎಸ್ ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿ ಜೈಲು ಪಾಲಾದ 26 ಜನ ಆರೋಪಿಗಳಿಗೆ ಗುರುವಾರ ಜಿಲ್ಲಾ ನ್ಯಾಯಲಯದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ಕಿಂಗ್ ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿ ವೈ ಎಸ್ ಪಿ ಮಲ್ಲಿಕಾರ್ಜುನ ಸಾಲಿ ಸೇರಿ 26 ಜನರಿಗೆ ಜಾಮೀನು ಲಭಿಸಿದೆ.

ಇದನ್ನೂ ಓದಿ:ಜಂಕ್ ಫುಡ್ ಗುಲಾಮಗಿರಿಯಿಂದ ಹೊರಬನ್ನಿ: ಬಿ.ಸಿ.ಪಾಟೀಲ್

ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಕೆ. ಬಿ. ಪಾಟೀಲ್ ಎಲ್ಲರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ನ್ಯಾಯಲಯ ಶರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಇದರೊಂದಿಗೆ ಪಿಎಸ್ಐ ನೇಮಕಾತಿಯ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ಒಟ್ಟು 36 ಜನರಿಗೆ ಜಾಮೀನು ಸಿಕ್ಕಂತಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next